More

    ಕಚೇರಿ ಬಿಟ್ಟು ಫೀಲ್ಡ್‌ಗೆ ಹೋಗಿ

    ಹಾವೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದ ನಡೆಸಿ, ಮಳೆಹಾನಿ, ಅನಾಹುತ ತಡೆಗಟ್ಟುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.


    ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್-ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್ ಗೆ ಹೋಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.


    ರಾಜ್ಯದ ಕೆಲವು ಭಾಗದಲ್ಲಿ ಮಳೆ, ಬಿತ್ತನೆ ಆರಂಭವಾಗಿದೆ. ಜೂನ್‌ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಮೇನಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದೆ. ಭಾರಿ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.


    ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರ್‌ನಂತಹ ಘಟನೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದರು.


    ಸಿಎಂ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts