ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ದಾಖಲೆ ಅಥವಾ ಸಾಕ್ಷ್ಯ ಇಲ್ಲದ ಇತಿಹಾಸವನ್ನು ಒಪ್ಪಿಕೊಳ್ಳಬಾರದು. ಯಾವುದೇ ಐತಿಹಾಸಿಕ ಟನೆಗಳನ್ನು ಸಂಪೂರ್ಣವಾಗಿ ಅಧ್ಯಯನ ನಡೆಸಿ, ಮುಂದಿನ ಪೀಳಿಗೆಗೆ ತಿಳಿಸುವುದು ಉತ್ತಮ. ಹೆಚ್ಚು ಓದಬೇಕು, ಅದರೊಂದಿಗೆ ಅನುಭವಿಸಬೇಕು ಎಂದು ಸಿವಿಲ್ ಇಂಜಿನಿಯರ್, ಮೆಟ್ರೋ ಪೊಲಿಟನ್ ಇತಿಹಾಸಕಾರ ಧರ್ಮೇಂದ್ರ ಕುವಾರ್ ಹೇಳಿದರು.
ಆಳ್ವಾಸ್(ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ರೋಸ್ಟ್ರಮ್ ವಾಗ್ಮಿಗಳ ವೇದಿಕೆ ವತಿಯಿಂದ ಆಯೋಜಿಸಲಾದ ಕರ್ನಾಟಕದ ಇತಿಹಾಸ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಾತನಾಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀವಲ್ಲಿ ಸೈದೂರು ಕಾರ್ಯಕ್ರಮ ನಿರೂಪಿಸಿದರು.