ಹೆಬ್ರಿ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

upanyasa
ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ನಡೆಯಿತು.
Published on

ಹೆಬ್ರಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ, ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ವತಿಯಿಂದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಆಧಾರಿತ ತಾಂತ್ರಿಕ ನವೋದ್ಯಮಗಳ ಮೂಲಕ ವ್ಯವಹಾರ ಮೌಲ್ಯ ನಿರ್ಮಾಣ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮಂಗಳವಾರ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಡಾ.ಪಿ.ಎಸ್.ಐತಾಳ್ ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ.ವಿದ್ಯಾಧರ ಹೆಗಡೆ ಎಸ್. ಅಧ್ಯಕ್ಷತೆ ವಹಿಸಿದ್ದರು. ದೀಪಕ್ ಶೆಟ್ಟಿ, ವಿಘ್ನೇಶ್ವರ ರಾವ್ ಉಪಸ್ಥಿತರಿದ್ದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net