ವಿಜಯವಾಣಿ ಸುದ್ದಿಜಾಲ ಧಾರವಾಡ
ಅನುವಾದ ಎಂಬ ಕೆಲಸಕ್ಕೆ ಒಂದು ಸಾಮಾಜಿಕ ಹಿನ್ನೆಲೆ ಇದೆ. ಎಲ್ಲರೂ ಸೇರುವುದಕ್ಕೆ ಸಾಮಾಜಿಕತೆ ಎನ್ನುತ್ತೇವೆ ಎಂದು ಪ್ರಾಧ್ಯಾಪಕ ಡಾ. ಎನ್. ಎಸ್. ಗುಂಡೂರ ಹೇಳಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ. ಸಿ.ಆರ್. ಯರವಿನತೆಲಿಮಠ ದತ್ತಿ ನಿಮಿತ್ತ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶೂನ್ಯ ಸಂಪಾದನೆಯ ಅನುವಾದ: ಸಾಮಾಜಿಕ ಇತಿಹಾಸದ ಒಳನೋಟಗಳು ವಿಷಯ ಕುರಿತು ಅವರು ಮಾತನಾಡಿದರು.
ಸಾಹಿತ್ಯ ಬೇರೆಯಲ್ಲ. ರಾಜಕೀಯ ಬೇರೆಯಲ್ಲ. ರಾಜಕೀಯ ಸ್ವರೂಪ ಕವಿರಾಜ ಮಾರ್ಗದಲ್ಲಿ ಬೇರೆ ಇದೆ. ಶೂನ್ಯ ಸಂಪಾದನೆ ಕಾಲಕ್ಕೆ ಬೇರೆ ಇದೆ. ಆಧುನಿಕ ಕಾಲದಲ್ಲಿ ಅದು ಬೇರೆ ಸ್ವರೂಪ ಪಡೆದಿದೆ. ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ಕಾರಣವಾದಂತೆ ಸಾಹಿತ್ಯ ಮತ್ತು ರಾಜಕೀಯ ಒಳಸುಳಿವು ಒಂದೇ ಆಗಿರುತ್ತದೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದರು.
ಮೈಸೂರು ಭಾಗದಲ್ಲಿ ರಾಜಾಶ್ರಯ ಇತ್ತು. ಆದರೆ ಉತ್ತರ ಭಾಗದಲ್ಲಿ ಅಂತಹ ಆಶ್ರಯ ಇಲ್ಲದ್ದರಿಂದ ಎಲ್ಲವನ್ನೂ ಹೋರಾಟದಿಂದಲೇ ಪಡೆಯುವಂತಾಯಿತು. ಮೈಸೂರಿಗೆ ಹೋದರೆ ಎಲ್ಲ ಸಂಸ್ಥೆಗಳೂ ಮಹಾರಾಜರ ಹೆಸರುಗಳಲ್ಲಿದ್ದರೆ, ಇಲ್ಲಿ ಸಮಷ್ಟಿ ಪ್ರಜ್ಞೆಯೊಂದಿಗೆ ಕರ್ನಾಟಕ ಹೆಸರನ್ನು ಹೋಟೆಲ್ನಿಂದ ವಿಶ್ವ ವಿದ್ಯಾಲಯದವರೆಗೆ ಇಟ್ಟುಕೊಳ್ಳಲಾಗಿದೆ. ಹೊಸ ರಾಜ್ಯ ನಿರ್ಮಾಣ ಮಾಡಬೇಕೆಂದಾಗ ನಮಗೆ ಇತಿಹಾಸ ಬಹಳ ಮುಖ್ಯ ಎಂದರು.
ಡಾ. ಎಸ್.ಆರ್. ರಾಮನಗೌಡರ ಅಧ್ಯಕ್ಷತೆ ವಹಿಸಿದ್ದರು. ಅಕ್ಕಮ್ಮ ಗುಂಡೂರ, ಬಸವಪ್ರಭು ಹೊಸಕೇರಿ, ಸತೀಶ ತುರಮರಿ, ಡಾ. ಧನವಂತ ಹಾಜವಗೋಳ, ಡಾ. ಡಿ.ಎಂ. ಹಿರೇಮಠ, ಪ್ರೊ. ಮಲ್ಲಿಕಾರ್ಜುನ ಪಾಟೀಲ, ನಿಂಗಣ್ಣ ಕುಂಟಿ, ಸಿ.ಯು. ಬೆಳ್ಳಕ್ಕಿ, ಡಾ. ಬಾಳಣ್ಣ ಶೀಗಿಹಳ್ಳಿ, ಬಾಬುರಾವ ಗಾಯಕವಾಡ, ಬಿ.ಡಿ. ಪಾಟೀಲ, ಬಸವರಾಜ ತಲ್ಲೂರ, ಸಿ.ಎಸ್. ಪಾಟೀಲ, ಚನ್ನಬಸವ ಮಾಳವಾಡ, ಚಂದ್ರಶೇಖರ ವಸ್ತ್ರದ, ನಾಗಪ್ಪ ಹುದ್ದಾರ, ಇತರರು ಇದ್ದರು.
ಶಿವಾನಂದ ಭಾವಿಕಟ್ಟಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಂಕರ ಕುಂಬಿ ನಿರೂಪಿಸಿದರು. ಶಶಿಧರ ತೋಡಕರ ವಂದಿಸಿದರು.
ಉಪನ್ಯಾಸ ಕಾರ್ಯಕ್ರಮ
You Might Also Like
Skin Care | ಚಳಿಗಾಲದಲ್ಲಿ ನಿಮ್ಮ ತ್ವಚೆಯು ಹಾಳಾಗದಂತೆ ಎಚ್ಚರವಹಿಸಿ; ಈ ಫೇಸ್ಪ್ಯಾಕ್ ಟ್ರೈ ಮಾಡಿ ಫಲಿತಾಂಶ ನೀವೇ ನೋಡಿ..
ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…
ಈ ಆಹಾರ ಪದಾರ್ಥದಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ; Health Tips ನಿಮಗಾಗಿ
ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.…
ಚಳಿಗಾಲದಲ್ಲಿ ಕೈ&ಕಾಲ್ಬೆರಳುಗಳ ಊತಕ್ಕೆ ಕಾರಣ ಈ ಕಾಯಿಲೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ… | Health Tips
ಚಳಿಗಾಲದಲ್ಲಿ ನೆಗಡಿ ಮಾತ್ರವಲ್ಲದೆ ಹಲವಾರು ಕಾಯಿಲೆಗಳು ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅದರಲ್ಲಿ ಚಿಲ್ಬ್ಲೈನ್ಸ್ ರೋಗವು ಒಂದಾಗಿದೆ. ಬಹುಶಃ…