ಮೂಡುಬಿದಿರೆ: ಉದ್ಯಮಿಗಳಾಗಲು ಆಶಯ ಹೊಂದಿರುವ ವಿದ್ಯಾರ್ಥಿಗಳು ಶಿಕ್ಷಣದ ಪ್ರಮಾಣ ಪತ್ರಗಳ ಆತ್ಮವಿಶ್ವಾಸದೊಂದಿಗೆ ಸಂವಹನ ನಡೆಸುವುದನ್ನೂ ಬೆಳೆಸಿಕೊಳ್ಳಬೇಕು. ಕಠಿಣ ಪರಿಶ್ರಮಕ್ಕೆ ಯಾವುದೇ ಪರ್ಯಾಯ ವಿಧಾನ ಇಲ್ಲ. ಹೊಸ ವಿಷಯಗಳನ್ನು ತಿಳಿದುಕೊಂಡು ಆಯಾ ಕಾಲದ ಪ್ರವೃತ್ತಿಗಳಿಗೆ ಅನುಗುಣವಾಗಿ ನವೀಕರಿಸಿಕೊಳ್ಳುವುದು ಯಶಸ್ವಿ ಉದ್ಯಮಕ್ಕೆ ಬಹಳ ಅಗತ್ಯ ಎಂದು ಪತ್ರಕರ್ತ ವಾಲ್ಟರ್ ನಂದಳಿಕೆ ಹೇಳಿದರು.
ಆಳ್ವಾಸ್ ಕಾಲೇಜಿನ ಮ್ಯಾನೇಜ್‌ಮೆಂಟ್ ವಿಭಾಗದ ಟ್ರೈಬ್ಲೇಜ್ ವಿದ್ಯಾರ್ಥಿ ವೇದಿಕೆ ವತಿಯಿಂದ ಹಮ್ಮಿಕೊಂಡ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜು ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಪ್ರಾಂಶುಪಾಲ ಡಾ.ಕುರಿಯನ್, ವಿಭಾಗ ಮುಖ್ಯಸ್ಥೆ ಸುರೇಖಾ, ಟ್ರೈಬ್ಲೇಜ್ ವಿದ್ಯಾರ್ಥಿ ವೇದಿಕೆ ಮಾರ್ಗದರ್ಶಕಿ ಸೋನಿ, ವಿದ್ಯಾರ್ಥಿ ಸಂಯೋಜಕರಾದ ಆದರ್ಶ್ ಶೆಟ್ಟಿ, ಭೂಮಿಕಾ ಉಪಸ್ಥಿತರಿದ್ದರು.
ಖುಷಿ ಶೆಟ್ಟಿ ಸ್ವಾಗತಿಸಿ, ಸಮೃದ್ಧಿ ಪ್ರಭು ವಂದಿಸಿದರು. ದೀಪಕ್ ಕುಮಾರ್ ನಿರೂಪಿಸಿದರು.