ನಶಾಮುಕ್ತ ಭಾರತ ನಿರ್ಮಾಣ : ವೃಷಾಂಕ್ ಖಾಡಿಲ್ಕರ್ ಕರೆ

New Project (5)
Published on

ವಿಜಯವಾಣಿ ಸುದ್ದಿಜಾಲ ಕೊಕ್ಕಡ

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ದಾಪುಗಾಲು ಇಡುತ್ತಿದ್ದು, ಈ ಕಾಲಘಟ್ಟದಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗದೆ ಪಂಚೇಂದ್ರಿಯಗಳು ಮತ್ತು ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು ಎಂದು ಅರಸಿನಮಕ್ಕಿಯ ಅರಿವು ಕೇಂದ್ರದ ಗೌರವ ಸದಸ್ಯ ವೃಷಾಂಕ್ ಖಾಡಿಲ್ಕರ್ ಹೇಳಿದರು.

ಅರಸಿನಮಕ್ಕಿ ಸರ್ಕಾರಿ ಪ್ರೌಢಶಾಲೆ ಹಾಗೂ ಗ್ರಾಮ ಪಂಚಾಯಿತಿಯ ಅರಿವು ಕೇಂದ್ರ ಸಹಯೋಗದಲ್ಲಿ ಶುಕ್ರವಾರ ಉಪನ್ಯಾಸ ಕಾರ್ಯಕ್ರಮದಲ್ಲಿ ‘ವ್ಯಸನಮುಕ್ತ ಭಾರತ’ ಕುರಿತು ಮಾತನಾಡಿದರು.

ಲೇಖಕಿ ರೇಣುಕಾ ಸುಧೀರ್ ಹದಿಹರೆಯದ ಸಮಸ್ಯೆಗಳ ಕುರಿತು ಮಾತನಾಡಿದರು. ಮುಖ್ಯ ಶಿಕ್ಷಕಿ ಮಂಜುಳಾ ಅಧ್ಯಕ್ಷತೆ ವಹಿಸಿದ್ದರು. ಧನಿಕ್ಷಾ ಪ್ರಾರ್ಥಿಸಿದರು. ಇಂಗ್ಲಿಷ್ ಶಿಕ್ಷಕಿ ಚೇತನಾ ಕುಮಾರಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಚೇತನಾ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net