More

    ‘ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 6 ಗಂಟೆಗೇ ಬನ್ನಿ’; ಪದವಿಪೂರ್ವ ಶಿಕ್ಷಣ ಇಲಾಖೆ ವಿರುದ್ಧ ಉಪನ್ಯಾಸಕರ ಆಕ್ರೋಶ

    ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ನಡೆಯುತ್ತಿರುವುದರಿಂದ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 6 ಗಂಟೆಗೆ ಹಾಜರಾಗಬೇಕೆಂದು ಇಲಾಖೆ ನೀಡಿರುವ ಸೂಚನೆಗೆ ಅಧಿಕಾರಿ ವರ್ಗದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

    ವಾರ್ಷಿಕ ಪರೀಕ್ಷೆಗಳು ಆ.19ರಿಂದ ಆರಂಭವಾಗಿದ್ದು, ಸೆ.3ರವರೆಗೆ ನಡೆಯಲಿವೆ. 18 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ 187 ಪರೀಕ್ಷಾ ಕೇಂದ್ರಗಳಿದ್ದು, ಬೆಂಗಳೂರಿನಲ್ಲಿ 8ರಿಂದ 10 ಕೇಂದ್ರಗಳಿವೆ. ಪರೀಕ್ಷಾ ಕಾರ್ಯಕ್ಕೆ ಜಿಲ್ಲಾ ಹಂತದ ತ್ರಿಸದಸ್ಯ ಸಮಿತಿ, ಪ್ರಶ್ನೆಪತ್ರಿಕೆ ಪಾಲಕ ಮಾರ್ಗವಾರು ತಂಡ, ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರು, ವಿಶೇಷ ಜಾಗೃತದಳ ಹಾಗೂ ಇತರೆ ವಿವಿಧ ಹಂತಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಇದನ್ನೂ ಓದಿ: ನಾನು ಟೈಟಾಗಿದ್ದೇನೆ ಗೊತ್ತಾಗಿಲ್ಲ, ಇನ್ನೊಂದು ಕಾರ್ಡ್ ನಂಬರ್ ಕೊಡಿ ಎಂದ; 730 ರೂಪಾಯಿ ವೈನ್‌ಗೆ 1.79 ಲಕ್ಷ ರೂ. ಧೋಖಾ

    ಈ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪರೀಕ್ಷಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಪರೀಕ್ಷಾ ದಿನಗಳಂದು ಕಡ್ಡಾಯವಾಗಿ ಬೆಳಗ್ಗೆ 6 ಗಂಟೆಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

    ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ಸಹಮುಖ್ಯ ಅಧೀಕ್ಷಕರಾಗಿ ನೇಮಕಮಾಡಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆ ತುಂಬಾ ಕಡಿಮೆ ಇದೆ. ಈ ಹಿಂದೆ ನಡೆಯುತ್ತಿದ್ದ ಪರೀಕ್ಷೆಗಳಿಗೆ 7 ಗಂಟೆಗೆ ಹೋಗಿ ಕರ್ತವ್ಯ ನಿರ್ವಹಿಸಿದ್ದೇವೆ. ಸ್ವಂತ ವಾಹನ ಸೌಕರ್ಯ ಇಲ್ಲದಿರುವವರು ಬಸ್ಸುಗಳ ಮೂಲಕ ಕೇಂದ್ರವನ್ನು ತಲುಪಬೇಕು. 10.30ಕ್ಕೆ ಆರಂಭವಾಗುವ ಪರೀಕ್ಷೆಗೆ 7 ಗಂಟೆಗೆ ಹೋಗಿ ಮಾಡುವುದೇನು? ಅಧಿಕಾರಿಗಳಿಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಈ ರೀತಿ ಸಮಯ ನಿಗದಿ ಮಾಡಿದ್ದಾರೆಂದು ಉಪನ್ಯಾಸಕರು ತಮ್ಮ ಬೇಸರ ಹೊರ ಹಾಕಿದ್ದಾರೆ. ತಕ್ಷಣ ಈ ಸುತ್ತೋಲೆ ಹಿಂಪಡೆಯಬೇಕೆಂದು ಉಪನ್ಯಾಸಕರು ಇಲಾಖೆಯನ್ನು ಒತ್ತಾಯಿಸಿದ್ದಾರೆ.

    ನಾಪತ್ತೆಯಾಗಿದ್ದ ಸಹೋದರಿ ರಕ್ಷಾಬಂಧನದಂದೇ ಪತ್ತೆ; ಕಾಣೆಯಾಗಿದ್ದ ತಂಗಿ ‘ರಿಮಿ’ಗೆ ಇದ್ದ ‘ಅಡ್ಡಿ’ ಏನು?

    ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

    ‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts