ಅಮೆಜಾನ್ ವಿರುದ್ಧ ಕಾನೂನು ಕ್ರಮ : ಸಚಿವ ಅರವಿಂದ ಲಿಂಬಾವಳಿ

arvindlimbavali
Published on

ಬೆಂಗಳೂರು : ಹೆಣ್ಣುಮಕ್ಕಳ ಒಳಉಡುಪಿನ ಮೇಲೆ ಕನ್ನಡದ ಬಾವುಟದ ಬಣ್ಣಗಳನ್ನು ಹಾಗೂ ಕರ್ನಾಟಕದ ರಾಜ್ಯ ಲಾಂಛನವನ್ನು ಬಳಸಿರುವ ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಕನ್ನಡದ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ನೆಲದ ಶ್ರೇಷ್ಠತೆಯ ಅರಿವಿಲ್ಲದ ವಿದೇಶಿ ಸಂಸ್ಥೆಗಳು ಕನ್ನಡದ ಅಸ್ಮಿತೆಗೆ ಅವಮಾನ ಮಾಡುವಂತಹ ಯಾವುದೇ ಕೆಲಸ ಮಾಡಿದರೂ ಅದನ್ನು ನಾನು ಪ್ರಬಲವಾಗಿ ಖಂಡಿಸುತ್ತೇನೆ. ಕನ್ನಡಿಗರ ಭಾವನೆಗೆ ಧಕ್ಕೆ ಮಾಡುವಂತಹ ಯಾವುದೇ ಕ್ರಮಕ್ಕೆ ನನ್ನ ತೀವ್ರ ವಿರೋಧವಿದೆ ಎಂದು ಲಿಂಬಾವಳಿ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾನು ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯವೆಂದು ಭಾವಿಸಿ, ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net