More

    ಹೆಚ್ಚುವರಿ ಪಟ್ಟಿ ಪ್ರಕಟಿಸದಿದ್ದರೆ ಕಾನೂನು ಕ್ರಮ: ಕೆಪಿಎಸ್ಸಿ ಅಧ್ಯಕ್ಷರಿಗೆ ಸರ್ಕಾರ ಎಚ್ಚರಿಕೆ

    ಬೆಂಗಳೂರು ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಹೆಚ್ಚುವರಿ ಪಟ್ಟಿ ಮತ್ತು ಆಯ್ಕೆ ಪಟ್ಟಿ ಪ್ರಕಟಿಸಲು ಮೀನಮೇಷ ಎಣಿಸುತ್ತಿರುವುದಕ್ಕೆ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಬಾಕಿ ಉಳಿದಿರುವ ಆಯ್ಕೆಪಟ್ಟಿಗಳನ್ನು ಪ್ರಕಟಿಸದಿದ್ದರೆ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

    ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

    ಕೆಪಿಎಸ್ಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹೆಚ್ಚುವರಿ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲು ಕರ್ತವ್ಯ ಲೋಪ ಎಸಗಿದ್ದಾರೆ. ಈ ಬಗ್ಗೆ ಉದ್ಯೋಗ ಆಕಾಂಕ್ಷಿಗಳಿಂದ ಹಲವು ರೀತಿಯ ದೂರುಗಳು ಬಂದಿವೆ. ಹೀಗಾಗಿ, 2015ರಿಂದ ಇಲ್ಲಿಯವರೆಗೂ ಹೆಚ್ಚುವರಿ ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲು ಅಧಿಸೂಚನೆ ಹೊರಡಿಸಲಾಗಿದೆ. ಆದರೂ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಲು ಮೀನಮೇಷ ಎಣಿಸಿದರೆ, ಅಧ್ಯಕ್ಷರ ವಿರುದ್ಧ ರಾಜ್ಯಪಾಲರಿಗೆ ಲಿಖಿತ ರೂಪದಲ್ಲಿ ಸರ್ಕಾರದ ಪರವಾಗಿ ದುರು ನೀಡಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ.

    ಅಧಿನಿಯಮದಲ್ಲಿ ಉಲ್ಲೇಖಿಸಿರುವಂತೆ ಅಗತ್ಯವಿರುವ ಮೂಲ ದಾಖಲಾತಿಯನ್ನು ಪರಿಶೀಲಿಸಿದ ನಂತರ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಆದ್ದರಿಂದ ಹಲವು ಇಲಾಖೆಗಳು ಕಳಹಿಸಿದ ಾರಂ ನಂ.7 ಪರಿಗಣಿಸಿ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಬೇಕೆಂದು ಸರ್ಕಾರವು ಪರಿಗಣಿಸಿದೆ. ಇದನ್ನು ಉಲ್ಲಂಸಿದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಿದೆ.

    ಅಧ್ಯಕ್ಷ-ಕಾರ್ಯದರ್ಶಿ ಜಟಾಪಟಿ:

    ಕೆಪಿಎಸ್ಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ನಡುವೆ ಇತ್ತೀಚಿನ ವರ್ಷಗಳಲ್ಲಿ ನಿರಂತರವಾಗಿ ಜಟಾಪಟಿ ನಡೆಯುತ್ತಿದೆ. ಆಯೋಗದ ಆದೇಶ, ನಿರ್ಣಯಗಳು ಮತ್ತು ಚರ್ಚೆಗಳನ್ನು ಸಾಮಾಜಿಕ ತಾಣಗಳಲ್ಲಿ ಹಾಗೂ ಅಭ್ಯರ್ಥಿಗಳೊಂದಿಗೆ ಹಂಚಿಕೊಳ್ಳುವ ಸಂಬಂಧ ಈ ಹಿಂದಿನ ಕಾರ್ಯದರ್ಶಿಗಳ ವಿರುದ್ಧ ಅಧ್ಯಕ್ಷರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ದೂರು ನೀಡಿದ್ದರು.

    ಕಾರ್ಯದರ್ಶಿಗಳು ತಮ್ಮ ಕಾರ್ಯವೈಖರಿ ಬದಲಾವಣೆ ಮಾಡಿಕೊಳ್ಳುವಂತೆ ಅಧಿಕಾರಿಗೆ ಸೂಚಿಸುವಂತೆ ಮನವಿ ಮಾಡಿದ್ದರು. ಬಳಿಕ ಸುರಲ್ಕರ್ ವಿಕಾಸ್ ಕಿಶೋರ್ ವರ್ಗಾವಣೆಯಾಗಿದ್ದರು. ಈಗ ಹಾಲಿ ಕಾರ್ಯದರ್ಶಿ ಅವರೊಂದಿಗೂ ಹಲವು ವಿಷಯಗಳಿಗೆ ವಾಗ್ವಾದ ನಡೆಸಲಾಗುತ್ತಿದ್ದು, ಅದು ಸರ್ಕಾರದ ಮುಖ್ಯ ಕಾರ್ಯದರ್ಶಿವರೆಗೂ ತಲುಪಿದೆ ಎಂದು ತಿಳಿದು ಬಂದಿದೆ.

    ಹೆಚ್ಚುವರಿ ಆಯ್ಕೆ ಪಟ್ಟಿ ಎಂದರೇನು?

    ನೇಮಕಾತಿ ಪ್ರಕ್ರಿಯೆಯಲ್ಲಿ ಪರೀಕ್ಷಾ ಲಿತಾಂಶ ಪ್ರಕಟಿಸಿ ಅರ್ಹ ಅಭ್ಯರ್ಥಿಗಳ ಹೆಸರುಗಳ ಪಟ್ಟಿ ಪ್ರಕಟಿಸಲಾಗುತ್ತದೆ. ನೇಮಕಾತಿ ಆದೇಶ ನೀಡಿದ ನಂತರ ನಿಗದಿಯಾಗಿದ್ದ ಹುದ್ದೆಗಳ ಭರ್ತಿಯಲ್ಲಿ ಕಾನೂನಾತ್ಮಕವಾಗಿ ಅಡತಡೆಗಳು ಬಂದು ನೇಮಕಾತಿ ತಡೆಹಿಡಿದಿದ್ದರೆ, ಮೀಸಲಾತಿ ವಿಚಾರವಾಗಿ ನೇಮಕಾತಿ ನೀಡದಿದ್ದರೆ ಮತ್ತು ಅರ್ಹರಿದ್ದು ವಿವಿಧ ಕಾರಣಗಳಿಗೆ ನೇಮಕ ಮಾಡದಿದ್ದಾಗ ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಅವಕಾಶ ನೀಡಲಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts