ಹೆಬ್ರಿ: ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯದಂತಹ ಸನ್ನಿವೇಶಗಳು ಉಂಟಾದಾಗ ಶೀಘ್ರವಾಗಿ ಸಂಬಂಧಪಟ್ಟ ಶಿಕ್ಷಕರಿಗೆ ತಿಳಿಸಬೇಕು ಎಂದು ಕಾರ್ಕಳದ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಕೋಮಲ ಆರ್.ಸಿ. ಹೇಳಿದರು.
ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ, ವಕೀಲರ ಸಂಘ ಕಾರ್ಕಳ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಆಶ್ರಯದಲ್ಲಿ ಶನಿವಾರ ಕಾನೂನು ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಕೀಲೆ ಶಿಲ್ಪಾ ಮಾಹಿತಿ ನೀಡಿದರು. ಪ್ರಾಂಶುಪಾಲೆ ಬೇಬಿ ಶೆಟ್ಟಿ, ಎಸ್‌ಡಿಎಂಸಿ ಸಮಿತಿ ಸದಸ್ಯ ಮುನಿಯಾಲು ಗೋಪಿನಾಥ್ ಭಟ್, ವಕೀಲ ಸುರೇಶ್ ಪೂಜಾರಿ, ಉಪಪ್ರಾಂಶುಪಾಲ ರವೀಂದ್ರ ರಾವ್ ಉಪಸ್ಥಿತರಿದ್ದರು. ಅನಿಲ್‌ಕುಮಾರ್ ಜೈನ್ ಸ್ವಾಗತಿಸಿದರು. ಅರುಣಾ ಎಸ್. ಕಾರ್ಯಕ್ರಮ ನಿರೂಪಿಸಿದರು.