ಕಾನೂನು ಅರಿವು ಮಾಹಿತಿ ಕಾರ್ಯಾಗಾರ

kanunu arivu
kanunu arivu
Published on

ಕುಂದಾಪುರ: ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ಬಾರ್ ಅಸೋಸಿಯೇಶನ್, ಅಭಿಯೋಗ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ಹಾಗೂ ಮಾಹಿತಿ ಕಾರ್ಯಾಗಾರ ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ರೋಟರಿ ಸಭಾ ಭವನದಲ್ಲಿ ಬುಧವಾರ ನಡೆಯಿತು.

ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳಾ ಬಿ. ಕಾರ್ಯಾಗಾರ ಉದ್ಘಾಟಿಸಿದರು. ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಎಚ್.ಡಿ.ಕುಲಕರ್ಣಿ, ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ, ಸಹಾಯಕ ಸರ್ಕಾರಿ ಅಭಿಯೋಜಕ ಉದಯ ಕುಮಾರ್ ಶೆಟ್ಟಿ, ಕುಂದಾಪುರ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಗೌಡ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್, ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಾಸುದೇವ ಮತ್ತಿತರರು ಉಪಸ್ಥಿತರಿದ್ದರು. ವಕೀಲ ಮಂಜುನಾಥ ಅರಾಟೆ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net