ನಳಂದ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Bdk_Nalanda
Published on

ಪೆರ್ಲ: ಪೆರ್ಲ ನಳಂದ ಕಾಲೇಜು ಎನ್ನೆಸ್ಸೆಸ್ ಘಟಕ, ನಳಂದ ಚಾರಿಟೆಬಲ್ ಟ್ರಸ್ಟ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.

ಎಣ್ಮಕಜೆ ಗ್ರಾಪಂ ಸದಸ್ಯೆ ರೂಪವಾಣಿ ಆರ್.ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲ ಮುನ್ನಾವರ್ ತಬ್ಶೀರ್ ಸಂಪನ್ಮೂಲ ವ್ಯಕ್ತಿಯಾಗಿ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ. ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಾರ್ವಜನಿಕ ಕಾನೂನು ಸ್ವಯಂಸೇವಕ ಶಂಕರನ್ ಸಿ.ಎಚ್. ವಂದಿಸಿದರು. ಸಹಾಯಕ ಯೋಜನಾಧಿಕಾರಿ ಭವ್ಯ ಬಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net