More

    ಮೊಬೈಲ್ ಬಿಟ್ಟು ಓದಿಗೆ ಆದ್ಯತೆ ನೀಡಿ

    ಚಿತ್ತಾಪುರ: ವಿದ್ಯಾರ್ಥಿಗಳು, ಯುವಕರು ಮೊಬೈಲ್, ಟಿವಿ ಸಂಘ ಬಿಟ್ಟು ಓದಿನ ಕಡೆ ಆದ್ಯತೆ ನೀಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಲಬುರಗಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕರಣ ಗುಜ್ಜರ್ ಹೇಳಿದರು.

    ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಕರಿಂದಲೇ ದೇಶ ಸಮೃದ್ಧಿಯಾಗಲಿದೆ. ಅವಶ್ಯಕತೆಯಿದ್ದಷ್ಟೆ ಮೊಬೈಲ್ ಬಳಕೆ ಮಾಡಿ. ಸ್ವಾಮಿ ವಿವೇಕಾನಂದರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಂಡು ಮಹಾನ್ ನಾಯಕನಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.

    ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಂತೋಷ ಪಲ್ಲೇದ್, ಸಿವಿಲ್ ನ್ಯಾಯಾಧೀಶ, ಸಮಿತಿ ಸದಸ್ಯ ಕಾರ್ಯದರ್ಶಿ ಸಂತೋಷಕುಮಾರ ದೈವಜ್ಞ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ಸಹಾಯಕ ನಿರ್ದೇಶಕ ಚೇತನ ಗುರಿಕಾರ, ಶಿಕ್ಷಣ ಸಂಯೋಜಕ ಸಂತೋಷಕುಮಾರ ಶಿರನಾಳ ಮಾತನಾಡಿದರು.

    ನ್ಯಾಯವಾದಿ ಮಲ್ಲಿಕಾರ್ಜುನ ಹೊನಗುಂಟಿ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಗುರುಪಾದಪ್ಪ ನೆಲ್ಲಗಿ, ಸಾಯಿರೆಡ್ಡಿ ನಾಯನೂರ ಇತರರಿದ್ದರು.

    ಗಂಗಣ್ಣ ಹೊಸ್ಸೂರ ನಿರೂಪಣೆ ಮಾಡಿದರು. ಭೀಮಾಶಂಕರ ದಂಡೆ ಸ್ವಾಗತಿಸಿದರು. ಶಿವುಕುಮಾರ ಬಿರಾದಾರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts