More

    ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಕಾನೂನಿನಲ್ಲೇ ತೊಡಕು: ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಕೆಲ ತೊಡಕುಗಳಿದ್ದು, ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ವಿಚಾರವಾಗಿ ಸಿಐಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಬೈಯಪ್ಪನಹಳ್ಳಿ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಸಿಕ್ಕಿದೆ. ಇದಕ್ಕೆ ಕಾನೂನಿನಲ್ಲಿರುವ ಕೆಲವು ತೊಡಕು ಕಾರಣ ಎಂದ ಸಚಿವರು, ಕಾನೂನಿನಲ್ಲಿ ಕೆಲ ಬದಲಾವಣೆ ತರುವ ಅಗತ್ಯವಿದೆ ಎಂದರು.

    ಭ್ರೂಣ ಹತ್ಯೆ ತಡೆಗೆ ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿಯೂ ರಚನೆ ಕುರಿತು ಚರ್ಚೆ ನಡೆಯುತ್ತಿದೆ. ಆರೋಗ್ಯ ಅಧಿಕಾರಿಗಳಿಗೆ ಅಕ್ರಮ ವಿರುದ್ಧ ಕಾರ‌್ಯಾಚರಣೆ ಕಷ್ಟ. ಪೊಲೀಸರ ಜತೆ ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಬೇಕಿದೆ ಎಂದರು.

    ಟಾಸ್ಕ್ ೆರ್ಸ್ ಯಾವ ರೀತಿ ಇರಬೇಕು. ಯಾರೆಲ್ಲಾ ಇರಬೇಕು ಎಂದು ಮುಂದಿನ ವಾರ ನಿರ್ಧಾರ ಮಾಡಲಾಗುತ್ತದೆ. ಭ್ರೂಣ ಹತ್ಯೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಆಗಬೇಕು. ಕಾನೂನಿನಲ್ಲಿ ಕೆಲವು ತೊಡಕುಗಳಿವೆ. ಹೀಗಾಗಿ ಅವುಗಳನ್ನು ಸರಿಪಡಿಸುವ ಬಗ್ಗೆ ಸಮಿತಿ ರಚಿಸಲಾಗುವುದು. ಕಾಯ್ದೆ ತಿದ್ದುಪಡಿಗೆ ಅಧಿವೇಶನದವರೆಗೂ ಕಾಯಲು ಸಾಧ್ಯವಿಲ್ಲ. ಹಾಗಾಗಿ ಸಮಿತಿ ರಚನೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಭೂಣ ಪತ್ತೆ ಸುಳಿವಿಗೆ ಬಹುಮಾನ: ಭ್ರೂಣ ಹತ್ಯೆ ಹಾಗೂ ಲಿಂಗ ಪತ್ತೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲು ನಿರ್ಧರಿಸಿದ್ದು, ಮುಂದಿನ ವಾರ ಅಧಿಕೃತ ೋಷಣೆ ಮಾಡುವುದಾಗಿ ಸಚಿವರು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts