

ಗಂಗೊಳ್ಳಿ: ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಬೈಂದೂರು ತಾಲೂಕಿನ ವಂಡ್ಸೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಶಿಬಿರ ಬುಧವಾರ ನಡೆಯಿತು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ಶ್ರೀಧರ ಭಟ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಮಹಿಳಾ ವಕೀಲೆ ಸ್ಮಿತಾ ಯು.ಶೆಟ್ಟಿ ಪೋಕ್ಸೋ ಬಗ್ಗೆ ಮಾಹಿತಿ ನೀಡಿದರು. ಸಹಶಿಕ್ಷಕ ವಸಂತರಾಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕ ಸೀತಾರಾಮ ಮೊಗವೀರ ವಂದಿಸಿದರು.