ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ : ಮಾಹಿತಿ ಕಾರ್ಯಾಗಾರದಲ್ಲಿ ತಿಮ್ಮೇಶ್ ಬಿ.ಎನ್.

byndoor
byndoor
Published on

ಬೈಂದೂರು: ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನದ ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನದ ಅಗತ್ಯಇದೆ. ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರಗಳಿಂದ ಹೆಚ್ಚಿನ ಲಾಭ ದೊರೆಯುತ್ತದೆ. ಜ್ಞಾನ ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ, ತರಬೇತಿ ಪಡೆದುಕೊಳ್ಳಬೇಕು ಎಂದು ಬೈಂದೂರು ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್.ಹೇಳಿದರು.

ಠಾಣೆಯಲ್ಲಿ ಆಯೋಜಿಸಿದ ತೆರೆದ ಮನೆ ಕಾರ್ಯಕ್ರಮದಲ್ಲಿ ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ನೀಡಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವರೆಗಿನ ವಿದ್ಯಾರ್ಥಿ ಜೀವನ ಕಷ್ಟದ್ದು. ಮಗ-ಮಗಳು ಕಾಲೇಜಿನ ಹೋಗಿ ಬರುತ್ತಾರೆ ಎಂದು ತಿಳಿದರಷ್ಟೇ ಸಾಲದು, ಅವರ ಚಲನವಲನಗಳ ಬಗೆಗೂ ಪಾಲಕರಿಗೆ ಅರಿವಿರಬೇಕು ಎಂದ ಪಿಎಸ್‌ಐ, ಪೊಲೀಸ್ ಠಾಣೆಯ ಕಾರ್ಯ ವೈಖರಿ, ಮಕ್ಕಳ ಹಕ್ಕುಗಳು, ಪೋಕ್ಸೋ , ರಸ್ತೆ ನಿಯಮಗಳು, ಸಾಮಾಜಿಕ ಜಾಲತಾಣಗಳಿಂದ ಮಕ್ಕಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಸೂಕ್ತ ಕಾನೂನು ಮಾಹಿತಿ ತಿಳಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಹಾಗೂ ಆರಕ್ಷಕ ಠಾಣೆ ಸಿಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net