More

    ಕಾನೂನು ಪಾಲನೆ ಕರ್ತವ್ಯವಾಗಲಿ

    ವಿಜಯವಾಣಿ ಸುದ್ದಿಜಾಲ ಭಟ್ಕಳ

    ಪ್ರತಿಯೊಬ್ಬರಿಗೂ ಕಾನೂನು ತಿಳಿವಳಿಕೆ ಅತಿ ಅವಶ್ಯಕವಾಗಿದೆ. ನಿತ್ಯದ ಆಗು ಹೋಗುಗಳಲ್ಲಿ ಕಾನೂನು ಪಾಲಿಸಬೇಕಾದುದು ಆದ್ಯ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಜಗದೀಶ ಬಿ. ಶಿವಪೂಜೆ ಹೇಳಿದರು.

    ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ತಾಲೂಕು ಅಧ್ಯಕ್ಷ ಆರ್. ಆರ್. ಶ್ರೇಷ್ಠಿ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಜತೆಗೆ ಜ್ಞಾನಾರ್ಜನೆಗಾಗಿ ಕಾನೂನುಗಳ ಅರಿವು ಹೊಂದಿ ಮುಂದೆ ಉತ್ತಮ ನಾಗರಿಕರಾಗಬೇಕು ಎಂದರು.

    ನ್ಯಾಯವಾದಿ ಎಂ.ಎಲ್. ನಾಯ್ಕ ಹಾಗೂ ಧನ್ಯಕುಮಾರ್ ಜೈನ ಅವರು, ಪರಿಸರ ರಕ್ಷಣೆ ಅದಕ್ಕೆ ನ್ಯಾಯಾಂಗದ ಕೊಡುಗೆ ಮತ್ತು ವಿದ್ಯಾರ್ಥಿಗಳ ಕರ್ತವ್ಯದ ಕುರಿತು ಉಪನ್ಯಾಸ ನೀಡಿದರು.

    ಸಹಾಯಕ ಸರ್ಕಾರಿ ಅಭಿಯೋಜಕಿ ಇಂದಿರಾ ನಾಯ್ಕ, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಾಧ್ಯಾಪಕಿ ರೂಪಾ ಖಾರ್ವಿ ಮಾತನಾಡಿದರು. ಶಿಕ್ಷಣ ಇಲಾಖೆಯ ಆರ್.ಎಸ್. ಗೊಂಡ, ವಕೀಲರ ಸಂಘದ ಕಾರ್ಯದರ್ಶಿ ಎಂ.ಜೆ. ನಾಯ್ಕ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts