More

  ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕಾನೂನಾತ್ಮಕಗೊಳಿಸಿ

  ರಾಯಚೂರು: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಗೆ ಕಾಯ್ದೆ ರೂಪಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
  ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿದ್ದು, ರೈತರ ಸಮಸ್ಯೆಗಳಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.
  ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವ ಕುರಿತಂತೆ ಎಂಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಬೇಕು. ತೀವ್ರ ಬರದಿಂದ ಕಂಗೆಟ್ಟಿರುವ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು. ಸಲ್ ಭೀಮಾ ಯೋಜನೆಯಡಿ ಹಣ ಕಟ್ಟಿದ ರೈತರಿಗೆ ಹಣ ಬಿಡುಗಡೆ ಮಾಡಬೇಕು.
  ಕೃಷಿ ಪಂಪ್‌ಸೆಟ್‌ಗಳಿಗೆ ಬೇಸಿಗೆಯಲ್ಲಿ ದಿನದ 24 ಗಂಟೆ ವಿದ್ಯುತ್ ಒದಗಿಸಬೇಕು. ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ ನದಿ ಜೋಡಣೆಗೆ ಸೂಕ್ತ ಕ್ರಮಕೈಗೊಳ್ಳಬೇಕು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
  ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಪದಾಕಾರಿಗಳಾದ ವೀರೇಶಗೌಡ ಕಡಗಂದೊಡ್ಡಿ, ನರಸಿಂಗರಾವ್ ಕುಲಕರ್ಣಿ, ಅಕ್ಕಮ್ಮ, ಹುಸೇನಪ್ಪ, ಈರಣ್ಣ ಗೋರ್ಕಲ್, ನರಸಪ್ಪ ಹೊಕ್ರಾಣಿ, ಹುಲಿಗೆಪ್ಪ ಜಾಲಿಬೆಂಚಿ, ವೆಂಕಟರೆಡ್ಡಿ ರಾಜಲಬಂಡಾ, ಅಬ್ದುಲ್ ಮಜೀದ್ ಬಿಚ್ಚಾಲಿ ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts