More

    ಸದನದಲ್ಲಿ ವಿಪಕ್ಷಗಳ ಪ್ರತಿಭಟನೆ; ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

    ಬೆಂಗಳೂರು: ಅನುದಾನ ತಾರತಮ್ಯ ಖಂಡಿಸಿ ರಾಜ್ಯ ಕಾಂಗ್ರೆಸ್​ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಮಂಡಿಸಿರುತ್ತಿರುವುದನ್ನು ಖಂಡಿಸಿ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು ಪ್ರತಿಭಟನೆ ನಡೆಸಿದ ಕಾರಣ ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

    ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ನಡೆಸಿದರು. ಹತ್ತು ನಿಮಿಷ ಕಲಾಪ ಮುಂದೂಡಿದ ಸಭಾಧ್ಯಕ್ಷ ಯು.ಟಿ. ಖಾದರ್, ತಮ್ಮ ಕಚೇರಿಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಂಧಾನಕ್ಕೆ ಯತ್ನಿಸಿದರು. ಆದರೆ, ಬಿಜೆಪಿ ಸದಸ್ಯರು ಪಟ್ಟು ಸಡಿಲಿಸದ ಕಾರಣ ಸಂಧಾನ ಯತ್ನ ವಿಫಲವಾಯಿತು.

    ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಕಲಾಪ ಆರಂಭವಾದ ಬಳಿಕವೂ ಬಿಜೆಪಿ-ಜೆಡಿಎಸ್​ ಶಾಸಕರು ಧರಣಿ ಮುಂದುವರೆಸಿದರು. ಗದ್ದಲದ ನಡುವೆಯೇ ಎರಡು ವರದಿಗಳ ಮಂಡನೆ ಮತ್ತು ಮಸೂದೆಗಳನ್ನು ಅಂಗೀಕರಸಿಲಾಯಿತು.  ಗದ್ದಲ‌ ಮತ್ತಷ್ಟು ಜೋರಾಗುತ್ತಿದ್ದಂತೆ ಸ್ಪೀಕರ್ ಸದನದ ಕಲಾಪವನ್ನು ಸೋಮವಾರ ಬೆಳಿಗ್ಗೆ 9.30ಕ್ಕೆ ಸ್ಪೀಕರ್ ಯು.ಟಿ. ಖಾದರ್ ಮುಂದೂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts