More

    ಸ್ತ್ರೀಯರು ಆಸ್ಪತ್ರೆ ಸದುಪಯೋಗ ಪಡೆಯಿರಿ

    ಕೊಪ್ಪಳ: ಮಹಿಳೆಯರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲು ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಆರಂಭಿಸಿದ್ದು, ಮಹಿಳೆಯರು ಇದರ ಸದುಪಯೋಗ ಪಡೆಯಬೇಕೆಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.

    ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಆಯುಷ್ಮತಿ ಕ್ಲಿನಿಕ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

    ಮಹಿಳೆಯರ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತ ಚರ್ಚೆಗೆ ಪ್ರತ್ಯೇಕ ಆಸ್ಪತ್ರೆ ಅವಶ್ಯವಿದೆ. ಮಹಿಳೆಯರಿಗೆ ವಿಶೇಷ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಆರಂಭಿಸಿದೆ. ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಪ್ರತಿದಿನ ಒಬ್ಬ ತಜ್ಞ ವೈದ್ಯರಿಂದ ಸೇವೆ ದೊರೆಯಲಿದೆ. ಎಲ್ಲ ಮಹಿಳೆಯರು ಇದರ ಲಾಭ ಪಡೆಯಬೇಕೆಂದು ಮನವಿ ಮಾಡಿದರು.

    ಡಿಎಚ್‌ಒ ಡಾ.ಅಲಕನಂದಾ ಮಳಗಿ ಮಾತನಾಡಿ, ಆಯುಷ್ಮತಿ ಕ್ಲಿನಿಕ್‌ನಲ್ಲಿ ಮಹಿಳೆಯರು ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು ಅವಕಾಶವಿರಲಿದೆ. ಹದಿಹರೆಯದವರಿಗೆ ದೈಹಿಕ ಬದಲಾವಣೆ, ನೈರ್ಮಲ್ಯ ಮತ್ತು ಸಂತಾನೋತ್ಪತ್ತಿ ಕುರಿತು ಅರಿವು ಮೂಡಿಸುವುದು ಮತ್ತು ಆಪ್ತ ಸಮಾಲೋಚನೆ ನಡೆಸಲಾಗುವುದು ಎಂದರು.
    ಜ್ಲಿಲಾ ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಸ್ತ್ರೀರೋಗ ತಜ್ಞ ಡಾ.ಬಸವರಾಜ ಸಜ್ಜನ, ಚರ್ಮರೋಗ ತಜ್ಞ ಡಾ.ಬಸವರಾಜ ಬಾಚಲಾಪುರ, ಎಲುಬು ಕೀಲು ತಜ್ಞ ಡಾ.ಪ್ರಸಾದ ಇತರರಿದ್ದರು.


    30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಅಸಂಕ್ರಾಮಿಕ ರೋಗಗಳ ತಪಾಸಣೆ ನಡೆಸಲಾಗುತ್ತದೆ. ಕ್ಷೇಮ ಚಟುವಟಿಕೆಗಳಾದ ಯೋಗ, ಧ್ಯಾನ, ಆಹಾರ ಪದ್ಧತಿ ಮತ್ತು ಉತ್ತಮ ಜೀವನ ಶೈಲಿ ಪಾಲಿಸುವುದರ ಮೂಲಕ ಮಹಿಳೆಯರು ತಮ್ಮ ಆರೋಗ್ಯದ ಕಡೆ ಗಮನಹರಿಸಲು ಸಾಧ್ಯವಾಗುತ್ತದೆ. ಪ್ರತಿ ದಿನ ಒಬ್ಬರಂತೆ ತಜ್ಞ ವೈದ್ಯರು ಸಾರ್ವಜನಿಕರಿಗೆ ಸೇವೆ ನೀಡಲಿದ್ದಾರೆ.
    ಡಾ.ಅಲಕನಂದಾ ಮಳಗಿ, ಜಿಲ್ಲಾ ಆರೋಗ್ಯಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts