ಶಾಸಕರ ಜತೆ ಚರ್ಚಿಸಿ ಜಿಪಂ ಅಧ್ಯಕ್ಷೆ ಮೇಲೆ ಕ್ರಮ – ಸತೀಶ ಜಾರಕಿಹೊಳಿ

ಬೆಳಗಾವಿ: ಜಿಪಂ ಕಾರ್ಯ ಚಟುವಟಿಕೆಗಳಿಂದ ದೂರವುಳಿದ ಅಧ್ಯಕ್ಷೆ ಆಶಾ ಐಹೊಳೆ ವಿರುದ್ಧ ಕ್ರಮ ಜರುಗಿಸುವ ಬಗ್ಗೆ ಶೀಘ್ರ ಸಭೆ ಕರೆಯಲಾಗುವುದು. ಶಾಸಕರು ಸೇರಿ ಎಲ್ಲ ಜನಪ್ರತಿನಿಧಿಗಳು ಸಮಗ್ರ ಚರ್ಚಿಸಿ ಅಂತಿಮ ತೀರ್ಮಾನ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಅಭಿವೃದ್ಧಿಗೆ ನನ್ನ ಮೊದಲ ಆದ್ಯತೆ. ನಗರವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವೆ ಎಂದ ಅವರು, ಮೈತ್ರಿ ಸರ್ಕಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Leave a Reply

Your email address will not be published. Required fields are marked *