More

    ಶಾಸಕರ ಮನೆಗೆ ಮುತ್ತಿಗೆ ಯತ್ನ

    ಅಥಣಿ: ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ಸರ್ಕಾರ ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಭಾನುವಾರ ಅಥಣಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಶಾಸಕ ಮಹೇಶ ಕುಮಠಳ್ಳಿ ಅವರ ಮನೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಸಮುದಾಯದ ಅಧ್ಯಕ್ಷ ರಾಜು ಜಮಖಂಡಿಕರ ಮಾತನಾಡಿ, ರಾಜಕಾರಣಿಗಳ ಕುತಂತ್ರದಿಂದಾಗಿ ನಮಗೆ ಎಸ್‌ಟಿ ಪ್ರಮಾಣ ಪತ್ರ ನೀಡುತ್ತಿಲ್ಲ. ಕೇಂದ್ರ ಸರ್ಕಾರ ತಳವಾರ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದ್ದು, ಅದೇ ಪ್ರಕಾರ ರಾಜ್ಯ ಸರ್ಕಾರ ಸಹ ತಳವಾರ ಜಾತಿಯನ್ನು ಪರಿಶಿಷ್ಟ ಪಂಗಡ (ಎಸ್ ಟಿ) ಸಮುದಾಯಕ್ಕೆ ಸೇರ್ಪಡೆ ಮಾಡಿ ಆದೇಶ ಮಾಡಿದ್ದರೂ ನಾಡ ಕಚೇರಿಗಳಲ್ಲಿ ಎಸ್‌ಟಿ ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ಆರೋಪಿಸಿದರು.

    ಮುಂಬರುವ ಅಧಿವೇಶನದಲ್ಲಿ ನಮ್ಮ ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ನಾಡ ಕಚೇರಿಗಳಲ್ಲಿ ಎಸ್‌ಟಿ ಜಾತಿ ಪ್ರಮಾಣ ಪತ್ರ ವಿತರಣೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳದೆ ಇದ್ದರೆ ಬೆಂಗಳೂರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ನ್ಯಾಯ ಸಿಗುವವರೆಗೆ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಬಸಪ್ಪ ಸನದಿ, ಉಮೇಶ ಕೋಳಿ, ಮೋಹನ ಸಲಗರ, ರಾಯಪ್ಪ ತಳವಾರ, ರಮೇಶ ತಳವಾರ, ಸುನೀಲ ಕೋರಿಕಾಯಿ, ಶಂಕರ ಭೋಸನಾಯಿಕ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts