23.2 C
Bangalore
Saturday, December 14, 2019

ಕೊಬ್ಬುಕರಗಿಸುವ ಪ್ರಯತ್ನದಲ್ಲಿ ನೀವಿದ್ದರೆ…ಇವುಗಳನ್ನೊಮ್ಮೆ ಟ್ರೈ ಮಾಡಿ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಮುಂದುವರಿಯುತ್ತಿರುವ ಈ ಕಾಲದಲ್ಲಿ ಆಹಾರ ಕ್ರಮ ತುಂಬ ಬದಲಾಗಿದೆ. ಅದರಲ್ಲೂ ನಗರ ಪ್ರದೇಶಗಳಲ್ಲಂತೂ ಬರ್ಗರ್​, ಜಿಡ್ಡುಯುಕ್ತ ಪದಾರ್ಥಗಳು, ಚಾಕೊಲೇಟ್​ಗಳು, ಪಿಜ್ಜಾ, ಸೋಡಾವನ್ನೊಳಗೊಂಡ ಡ್ರಿಂಕ್ಸ್​ಗಳೇ ದಿನನಿತ್ಯದ ಆಹಾರಗಳಾಗಿಬಿಟ್ಟಿವೆ. ಪರಿಣಾಮ ದೇಹದಲ್ಲಿ ಕೊಬ್ಬಿನ ಅಂಶದ ಜತೆಗೆ ಅನಾರೋಗ್ಯವೂ ಹೆಚ್ಚಾಗುತ್ತಿದೆ.

ಬಹುತೇಕ ಜನರಲ್ಲಿ ಕೊಬ್ಬಿನ ಅಂಶ ಅಧಿಕವಾಗಿದೆ. ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಅಲ್ಲದೆ ಅಜೀರ್ಣ ಸೇರಿ ದೇಹದ ಹಲವು ಕ್ರಿಯೆಗಳ ಏರುಪೇರಿಗೆ ಕೊಬ್ಬು ಕಾರಣವಾಗುತ್ತದೆ. ಈ ಕೊಬ್ಬು ಕರಗಿಸಲು ಕೆಲವರು ಯೋಗ, ವ್ಯಾಯಾಮಗಳ ಮೊರೆ ಹೋಗುತ್ತಾರೆ. ಆದರೆ ಇನ್ನೂ ಅನೇಕರಿಗೆ ಅದಕ್ಕೆಲ್ಲ ಸಮಯ ಸಿಗುವುದಿಲ್ಲ. ಅಂಥವರು ಕೆಲವು ಆಹಾರದ ಮೂಲಕವೇ ಕೊಬ್ಬನ್ನು ನಿಯಂತ್ರಿಸಿಕೊಳ್ಳಬಹುದು.

ನಿಂಬೆ ನೀರು(ಪಾನಕ)
ನಿಂಬೆ ನೀರಿನಿಂದ ದೇಹದಲ್ಲಿ ಕರಗಬಲ್ಲ ನಾರಿನ ಅಂಶ ಹೆಚ್ಚಿನ ಉತ್ಪತ್ತಿಯಾಗುತ್ತದೆ. ಇದು ಸ್ಪಾಂಜ್​ನಂತೆ ಕೆಲಸ ಮಾಡಿ ಜೀರ್ಣಾಂಗದಲ್ಲಿರುವ ನೀರನ್ನು ಹೀರಿಕೊಳ್ಳುತ್ತದೆ. ಅಲ್ಲದೆ ಜಿಗುಟಾದ ದ್ರವ್ಯರಾಶಿಯನ್ನು ಉತ್ಪತ್ತಿ ಮಾಡುತ್ತದೆ. ಇದು ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್​ನ್ನು ನಾಶ ಮಾಡುತ್ತದೆ.

ದಾಳಿಂಬೆ ಜ್ಯೂಸ್​
ದಾಳಿಂಬೆ ಹಣ್ಣಿನಲ್ಲಿ ಹೇರಳವಾಗಿ ಆ್ಯಂಟಿಆಕ್ಸಿಡೆಂಟ್​ ಅಂಶವಿದೆ. ಇದು ರಕ್ತನಾಳಗಳಲ್ಲಿ ರಕ್ತದ ಸುಗಮ ಸಂಚಾರಕ್ಕೆ ಸಹಕಾರಿಯಾಗಿದೆ. ದೇಹದಲ್ಲಿ ಕೊಬ್ಬು ಹೆಚ್ಚುವುದನ್ನು ತಡೆಯುತ್ತದೆ. ಹಾಗೇ ಕೊಲೆಸ್ಟ್ರಾಲ್​ಗಳಿಂದ ಉಂಟಾಗುವ ಸಮಸ್ಯೆಯನ್ನೂ ನಿಯಂತ್ರಣ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್​ಗಳನ್ನು ತೊಡೆದು ಹೃದಯದ ಆರೋಗ್ಯವನ್ನೂ ವೃದ್ಧಿಸುತ್ತದೆ.

ವಾಲ್​ನಟ್ಸ್​
ವಾಲ್​ನಟ್ಸ್​ಗಳಲ್ಲಿ ವಿಟಮನ್ ಬಿ, ವಿಟಮನ್​ ಇ, ಒಮೆಗಾ 3 ಕೊಬ್ಬಿನಾಂಶ ಅತ್ಯಧಿಕ ಪ್ರಮಾಣದಲ್ಲಿ ಇದ್ದು ಅನಗತ್ಯ ಕೊಬ್ಬಿನ ವಿರುದ್ಧ ಹೋರಾಡುತ್ತವೆ. ಇವೆಲ್ಲ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಣ ಮಾಡುತ್ತವೆ. ಹೃದಯ ಬಡಿತ ಅಸಮತೋಲನವಾಗುವುದನ್ನು ತಡೆಯುತ್ತದೆ.

ಓಟ್ಸ್
ಒಂದು ಬೌಲ್​ ತುಂಬ ಓಟ್​ಮೀಲ್​ ತಿಂದು ಕೊಲೆಸ್ಟ್ರಾಲ್​ ಹೋಗಲಾಡಿಸಿಕೊಳ್ಳಿ. ಇದರಲ್ಲಿ ಕರಗಬಲ್ಲಂಥ ನಾರಿನಾಂಶ ಇದ್ದು ಎಲ್​ಡಿಎಲ್​ ಹಾಗೂ ಕೆಟ್ಟ ಕೊಬ್ಬಿನಾಂಶವನ್ನು ಕರಗಿಸುತ್ತದೆ. ಓಟ್ಸ್​ನಿಂದ ಹಲವು ತಿನಿಸುಗಳನ್ನು ಮಾಡಬಹುದಾಗಿದ್ದು ದೇಹದ ಆರೋಗ್ಯಕ್ಕೆ ಉತ್ತಮ.

ಅಗಸೆ ಬೀಜ
ಅಗಸೆ ಬೀಜಗಳು ನಾರಿನಾಂಶ ಹಾಗೂ ಒಮೆಗಾ 3 ಕೊಬ್ಬಿನ ಆಮ್ಲಗಳನ್ನು ಒಳಗೊಂಡಿವೆ. ಇವುಗಳು ದೇಹದಲ್ಲಿನ ಕೊಬ್ಬುನ್ನು ಕಡಿಮೆ ಮಾಡುತ್ತವೆ. ಹಸಿವಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಈ ಬೀಜಗಳಿಂದ ತಯಾರಿಸಿದ ಆಹಾರ ಸೇವನೆಯಿಂದ ಬಹುಕಾಲದವರೆಗೆ ಹಸಿವನ್ನು ನಿಗ್ರಹಿಸಬಹುದು. ರಕ್ತದಲ್ಲಿ ಸೇರಿಕೊಳ್ಳುವ ಕೊಬ್ಬನ್ನು ಕರಗಿಸಿ ಪಾರ್ಶ್ವವಾಯು, ಹೃದಯಾಘಾತಗಳು ಬಾರದಂತೆ ತಡೆಯುತ್ತದೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...