More

    ಅನುಮಾನಾಸ್ಪದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ

    ಹಾನಗಲ್ಲ: ತಾಲೂಕಿನ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.


    ಎಂಟು ವರ್ಷದ ಗಂಡು ಚಿರತೆ ಇದಾಗಿದ್ದು, ಚಿರತೆ ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ಚಿರತೆಗಳ ಕಾದಾಟದಿಂದ ಗಂಭೀರವಾಗಿ ಗಾಯಗೊಂಡು ಚಿರತೆ ಸಾವನ್ನಪ್ಪಿರಬಹುದೆಂದು ಅರಣ್ಯಾಧಿಕಾರಿಗಳು ಅಂದಾಜಿಸಿದ್ದಾರೆ. ಚಿರತೆಯ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕಿನ ಮಕರವಳ್ಳಿ ಹಾಗೂ ಹೊಂಕಣ ಅರಣ್ಯ ಪ್ರದೇಶದಲ್ಲಿ ಚಿರತೆಗಳಿರುವುದು ಖಾತ್ರಿಯಾದಂತಾಗಿದೆ.


    600 ಎಕರೆ ವಿಸ್ತೀರ್ಣದ ಮಕರವಳ್ಳಿ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಾದ ಜಿಂಕೆ, ಮೊಲ, ನರಿ, ಕಾಡುಹಂದಿ ಸೇರಿ ವಿವಿಧ ಪ್ರಾಣಿಗಳಿವೆ. ಹೀಗಾಗಿ ಆಹಾರಕ್ಕಾಗಿ ಚಿರತೆಗಳು ಇಲ್ಲಿ ಸಂಚರಿಸುತ್ತಿದ್ದು, ಆಗಾಗ ಗ್ರಾಮಸ್ಥರು ಮತ್ತು ರೈತರ ಕಣ್ಣಿಗೆ ಬಿದ್ದು, ಭಯದ ವಾತಾವರಣ ಸೃಷ್ಟಿಸುತ್ತಿವೆ.
    ಘಟನಾ ಸ್ಥಳಕ್ಕೆ ಹಾನಗಲ್ಲ ಅರಣ್ಯ ಇಲಾಖೆ ಅಧಿಕಾರಿಗಳಾದ ಎಸಿಎಫ್ ಶಿವಾನಂದ ತೋಡಕರ್, ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಶು ವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗಿರೀಶ ರೆಡ್ಡೇರ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಹೊಂಕಣ ಅರಣ್ಯ ಪ್ರದೇಶದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts