ಪಡುಪೆರಾರದಲ್ಲಿ ನಾಯಿಮರಿಯನ್ನು ಹೊತ್ತೊಯ್ದ ಚಿರತೆ; ಸಿ.ಸಿ. ಕ್ಯಾಮರಾದಲ್ಲಿ ದೃಶ್ಯ ಸೆರೆ: ಗ್ರಾಮಸ್ಥರಲ್ಲಿ ಆತಂಕ

web - chirathe
ಸುಂದರ ಸಪಲಿಗ ಎಂಬವರ ಮನೆಯ ನಾಯಿ ಮರಿಯನ್ನು ಚಿರತೆ ಹೊತ್ತೊಯ್ದಿರುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿರುವುದು.
Published on

ಗುರುಪುರ: ಪಡುಪೆರಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ರಾತ್ರಿ ವೇಳೆ ಚಿರತೆ ಓಡಾಟ ಕಂಡು ಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ನಾಯಿಮರಿಯನ್ನು ಹೊತ್ತೊಯ್ದ ಚಿರತೆ

ಪಡುಪೆರಾರದ ಪುಚ್ಚಾಳ ಎಂಬಲ್ಲಿ ಗುರುವಾರ ರಾತ್ರಿ ಸುಂದರ ಸಪಲಿಗ ಎಂಬವರ ಮನೆಗೆ ನಾಯಿಯ ಮರಿಯನ್ನು ಚಿರತೆ ಹೊತ್ತೊಯ್ದಿದೆ. ನಾಯಿ ಮರಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುತ್ತಿರುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿರತೆ ಹಾವಳಿಯಿಂದ ಗ್ರಾಮಸ್ಥರಿಗೆ ಭೀತಿ

ಚಿರತೆ ಹಾವಳಿಯಿಂದ ಭಯಭೀತರಾಗಿರುವ ಗ್ರಾಮಸ್ಥರು ರಾತ್ರಿ ವೇಳೆ ಮನೆಯಿಂದ ಹೊರಗೆ ಬರಲು ಹಿಂಜರಿಯುವಂತಾಗಿದೆ. ನಾಡಲ್ಲಿ ತಿರುಗಾಡುವ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net