

ಬೈಂದೂರು: ಗೋಳಿಬೇರು ಎಂಬಲ್ಲಿ ಬಾವಿಯೊಳಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ರಾಮ ಪೂಜಾರಿ ಎಂಬುವರ ಮನೆಯ ಬಾವಿಯಲ್ಲಿ ಚಿರತೆ ಬಿದ್ದಿದ್ದು, ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಬಾವಿಯೊಳಗಿನ ಪೊಟರೆಯಲ್ಲಿ ಅವಿತಿದ್ದ ಚಿರತೆಯನ್ನು ರಕ್ಷಿಸಿದ್ದಾರೆ. ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಉಪವಲಯ ಅರಣ್ಯಾಧಿಕಾರಿ ಹರೀಶ್ ವಿ., ಗಸ್ತು ಅರಣ್ಯ ಪಾಲಕರಾದ ಮಂಜುನಾಥ ನಾಯ್ಕ, ಶಂಕರ್ ಹಾಗೂ ಗ್ರಾಮಸ್ಥರು ಇದ್ದರು.