More

    ಕೆಆರ್​​ಎಸ್​ ಡ್ಯಾಂ ಬಳಿ ಚಿರತೆ ಪ್ರತ್ಯಕ್ಷ; ಮುಂದುವರೆದ ಪ್ರವಾಸಿಗರಿಗೆ ನಿರ್ಬಂಧ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್​​ಎಸ್​ ಡ್ಯಾಂ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ಬೃಂದಾವನಕ್ಕೆ ಆಗಮಿಸುವ ಪ್ರವಾಸಿಗರಿಗೆ ಹೇರಿರುವ ನಿರ್ಬಂಧ ಮುಂದುವರೆದಿದೆ.

    ಶನಿವಾರ (ಅ.22) ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕೆಆರ್​​ಎಸ್​​ ಡ್ಯಾಂ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು. ಈ ಹಿನ್ನಲೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಕಳೆದ ರಾತ್ರಿ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಡ್ಯಾಂನ ಮೆಟ್ಟಿಲಿನ ಬಳಿ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಹಿಡಿಯಲು ಕಾರ್ಯಾಚರಣೆ ಮಾಡುತ್ತಿದ್ದಾರೆ. ಬೋನ್​ನಲ್ಲಿ ನಾಯಿ ಇರಿಸಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ಜೊತೆಗೆ ಎಸಿಎಫ್ ಮಹದೇವಸ್ವಾಮಿ ನೇತೃತ್ವದಲ್ಲಿ ಕೆಆರ್​​ಎಸ್​​ ಡ್ಯಾಂ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

    ಹಬ್ಬದ ಕಾರಣದಿಂದ ಸಾಲು ಸಾಲು ರಜೆ ಇರುವ ಹಿನ್ನಲೆಯಲ್ಲಿ ಬೃಂದಾವನಕ್ಕೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇದೀಗ ನಿರ್ಬಂಧ ಹೇರಿರುವುದರಿಂದ ಪ್ರವಾಸಿಗರಿಲ್ಲದೆ ಬೃಂದಾವನ ಬೀಕೋ ಎನ್ನುತ್ತಿದೆ.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts