More

    ಕುಷ್ಠರೋಗ ನಿರ್ಮೂಲನೆಗೆ ಶ್ರಮಿಸಿ

    ಬೆಳಗಾವಿ: ಸೂಕ್ತ ಚಿಕಿತ್ಸೆಯ ಮೂಲಕ ಕುಷ್ಠರೋಗ ನಿರ್ಮೂಲನೆ ಸಾಧ್ಯವಿದ್ದು, ಈ ಬಗ್ಗೆ ಅಧಿಕಾರಿಗಳು ನಿರಂತರ ಜನಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ ಕುಷ್ಠರೋಗ ನಿರ್ಮೂಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಜಿಲ್ಲೆಯಲ್ಲಿ ಸ್ಪರ್ಶ ಕುಷ್ಠರೋಗ ನಿರ್ಮೂಲನಾ ಪಾಕ್ಷಿಕವನ್ನು ಜ. 30ರಿಂದ ಫೆ. 13ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ. ಈ ಕುರಿತು ಜನರಿಗೆ ತಿಳಿವಳಿಕೆ ನೀಡುವಂತೆ ತಿಳಿಸಿದರು.

    84 ಪ್ರಕರಣ ಪತ್ತೆ: ಜಿಲ್ಲಾ ಕುಷ್ಠರೋಗ ತಜ್ಞೆ ಡಾ. ಚಾಂದನಿ ಮಾತನಾಡಿ, ಬ್ಯಾಕ್ಟೀರಿಯಾಗಳಿಂದ ಹರಡುವ ರೋಗಗಳು ಮತ್ತು ಕುಷ್ಠರೋಗ ಹರಡುವ ಲಕ್ಷಣಗಳ ಬಗ್ಗೆ ಹಾಗೂ ರೋಗಕ್ಕೆ ಇರುವ ಚಿಕಿತ್ಸೆ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲಾಗುತ್ತಿದೆ. ಭಾರತದಲ್ಲಿ ಶೇ.60ರಷ್ಟು ಜನರಲ್ಲಿ ಕುಷ್ಠರೋಗ ಕಂಡು ಬರುತ್ತದೆ. ರೋಗ ನಿಯಂತ್ರಣ ಮಾಡಲು ಗುಜರಾತಿನಲ್ಲಿ ಪ್ರಯೋಗ ಮಾಡಲಾಗುತ್ತಿದೆ. ಗುಜರಾತಿನಲ್ಲಿ ಯಶಸ್ಸು ಕಂಡರೆ ಭಾರತದಲ್ಲಿ ಕುಷ್ಠರೋಗದ ಔಷಧ ವಿಸ್ತರಣೆ ಮಾಡಲಾಗುವುದು. ಜಿಲ್ಲೆಯಲ್ಲಿ ಒಟ್ಟು 84 ಕುಷ್ಠರೋಗ ಪ್ರಕರಣಗಳು ಕಂಡು ಬಂದಿವೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ವೈದ್ಯಾಧಿಕಾರಿ ಡಾ.ಎಸ್.ವಿ. ಮುನ್ಯಾಳ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

    ಕುಷ್ಠರೋಗ ನಿವಾರಣೆ ಹಾಗು ಜಾಗೃತಿ ಮೂಡಿಸಲು ಶಾಲೆಯಲ್ಲಿ, ಅಂಗನವಾಡಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಅರಿವು ಮೂಡಿಸಲಾಗುವುದು. ಈ ನಿಟ್ಟಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ಕೆಲಸ ಮಾಡಲು ಪಿಡಿಒಗಳಿಗೆ ಸೂಚನೆ ನೀಡಲಾಗುವುದು.
    | ಡಾ. ಕೆ.ವಿ. ರಾಜೇಂದ್ರ ಜಿಪಂ ಸಿಇಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts