More

    ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಯಲ್ಲಿ ಅಡುಗೆ ತಯಾರಿಕರಿಂದ ಮಕ್ಕಳಿಗೆ ಪಾಠ

    ಕಳಸ: ಸಂಸೆ ಗ್ರಾಪಂ ವ್ಯಾಪ್ತಿಯಲ್ಲಿ ಇಬ್ಬರು ಕಾಯಂ ಶಿಕ್ಷಕರಿದ್ದು, ಇವರೇ ಸಂಸೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ನೋಡಿಕೊಳ್ಳುವ ಪರಿಸ್ಥಿತಿ ಇದೆ. ಶಿಕ್ಷಕರು ಪ್ರತಿ ದಿನ ಶಾಲೆಯಿಂದ ಶಾಲೆಗೆ ಅಲೆದಾಡುತ್ತಾರೆ ಹೊರತು ಮಕ್ಕಳಿಗೆ ಶಿಕ್ಷಣ ಸಿಗುತ್ತಿಲ್ಲ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದೆ ಎಂದು ಬುಧವಾರ ಸಂಸೆ ಗ್ರಾಪಂನಲ್ಲಿ ನಡೆದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
    ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದೇ ಅಡುಗೆ ಮಾಡುವವರು ಮಕ್ಕಳಿಗೆ ಪಾಠ ಮಾಡುವ ಪರಿಸ್ಥಿತಿ ಬಂದಿದೆ. ಇರೋ ಇಬ್ಬರು ಶಿಕ್ಷಕರು ಎಲ್ಲ ಶಾಲೆಗಳನ್ನು ನೋಡಿಕೊಳ್ಳುವ ಅನಿವಾರ್ಯದ ಜತೆಗೆ ಬಿಸಿಯೂಟದ ಲೆಕ್ಕ ಬರೆಯುವುದೇ ಕೆಲಸವಾಗಿದೆ. ಗ್ರಾಮೀಣ ಪ್ರದೇಶದ ಬಡವರ ಮಕ್ಕಳಿಗೆ ಶಿಕ್ಷಣವೇ ಇಲ್ಲದಂತಾಗಿದೆ. ಶಿಕ್ಷಣ ಇಲಾಖೆ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸದೆ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
    ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಉಪಯೋಗಕ್ಕೆ ಬಾರದ ಗಿಡಗಳನ್ನು ನೆಡುವುದನ್ನು ಬಿಟ್ಟು ಪ್ರಾಣಿ, ಪಕ್ಷಿಗಳಿಗೆ ಆಹಾರ ಸಿಗುವ ಹಣ್ಣುಗಳ ಗಿಡವನ್ನು ನೆಡುವುದರಿಂದ ರೈತರಿಗೆ ಪ್ರಾಣಿ, ಪಕ್ಷಿಗಳ ತೊಂದರೆ ತಪ್ಪುತ್ತದೆ. ರಸ್ತೆ ಬದಿಯ ಚರಂಡಿಗಳಲ್ಲಿ ಗಿಡಗಳನ್ನು ನೆಡುವುದನ್ನು ಬಿಟ್ಟು ಅಗತ್ಯವಿರುವಲ್ಲಿ ಗಿಡಗಳನ್ನು ನೆಡಬೇಕು. ಅಲ್ಲದೆ ರಸ್ತೆ ಬದಿಯಲ್ಲಿ ರುವ ಮರಗಳಿಂದ ರಸ್ತೆಗಳು ಹಾಳಾಗುತ್ತಿದೆ. ಗ್ರಾಮ ಅರಣ್ಯ ಸಮಿತಿಯಿಂದ ಹಕ್ಕು ಪತ್ರ ನೀಡಿದ್ದರೂ ಮನೆಗೆ ಹೋಗುವ ರಸ್ತೆ ಮಾಡಲು ಅರಣ್ಯ ಇಲಾಖೆ ಬಿಡುತ್ತಿಲ್ಲ ಎಂದು ಇಲಾಖೆ ವಿರುದ್ಧ ದೂರಿದರು.
    ಸಂಸೆ ಗ್ರಾಮ ಪಂಚಾಯಿತಿಗೆ ವರ್ಷಕ್ಕೆ ಮೂರು ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜನೆ ಮಾಡುವುದನ್ನು ಬಿಟ್ಟು ಈಗಿರುವ ಅಭಿವೃದ್ಧಿ ಅಧಿಕಾರಿಗಳನ್ನು ಕಾಯಂ ಆಗಿ ನೇಮಿಸಬೇಕು ಹಾಗೂ ವಾರದ ಕೊನೆಯಲ್ಲಿ ಬಾಳ್‌ಗಲ್ ಮತ್ತು ಸಂಸೆಯಲ್ಲಿ ಪ್ರವಾಸಿಗರ ದಟ್ಟನೆ ಹೆಚ್ಚಾಗಿದ್ದು, ವಾಹನಗಳಿಂದ ಟ್ರಾಫಿಕ್ ಜಾಮ್ ಆಗುತ್ತಿದೆ. ಆದ್ದರಿಂದ ವಾರಾಂತ್ಯದಲ್ಲಿ ಇಲ್ಲಿಗೆ ಪೊಲೀಸರನ್ನು ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts