ರಾವಂದೂರು: ಪಠ್ಯೇತರ ಚಟುವಟಿಕೆಯೊಂದಿಗೆ ಪಠ್ಯ ಚಟುವಟಿಕೆಯತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಕೆಪಿಎಸ್ ಶಾಲೆಗಳ ಉಪಾಧ್ಯಕ್ಷ ಆರ್.ವಿ.ವಿಶ್ವನಾಥ್ ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಗ್ರಾಮದ ಕೆಪಿಎಸ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಯೊಂದಿಗೆ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಗಮನ ಹರಿಸಬೇಕು. ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕು ಎಂದು ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಜಲೇಂದ್ರ, ಸುರೇಶ್, ನದೀಮ್, ತೇಜಸ್ವಿನಿ, ಉಪ ಪ್ರಾಂಶುಪಾಲ ಸುರೇಶ್, ಉಪನ್ಯಾಸಕ ಸುಭಾಷ್ ಚಂದ್ರ, ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಇತರರು ಇದ್ದರು.
TAGGED:MysoreRavanduruಅಭಿನಂದಿಸಿಆರ್.ವಿ.ವಿಶ್ವನಾಥ್ಉಪ ಪ್ರಾಂಶುಪಾಲ ಸುರೇಶ್ಉಪನ್ಯಾಸಕ ಸುಭಾಷ್ ಚಂದ್ರಕೆಪಿಎಸ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳನ್ನುಕೆಪಿಎಸ್ ಶಾಲೆಗಳ ಉಪಾಧ್ಯಕ್ಷಚಾಮರಾಜನಗರಜಿಲ್ಲಾ ಮಟ್ಟದ ಕ್ರೀಡಾಕೂಟತೇಜಸ್ವಿನಿದೈಹಿಕ ಶಿಕ್ಷಣ ಶಿಕ್ಷಕ ವಿಜಯ್ನದೀಮ್ಪಠ್ಯ ಚಟುವಟಿಕೆ'ಪಠ್ಯೇತರ ಚಟುವಟಿಕೆಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಮೈಸೂರುರಾಜ್ಯಮಟ್ಟಕ್ಕೆ ಆಯ್ಕೆಯಾದರಾವಂದೂರುವಿದ್ಯಾರ್ಥಿಗಳು ಗಮನ ಹರಿಸಬೇಕುಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಜಲೇಂದ್ರಸುರೇಶ್