More

    ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಲಿ

    ಮದ್ದೂರು; ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪ್ರತಿಭಾವಂತರಾಗಿ ರೂಪುಗೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಸಲಹೆ ನೀಡಿದರು.

    ಪಟ್ಟಣದ ಚನ್ನೇಗೌಡನದೊಡ್ಡಿಯ ವರ್ಧಮಾನ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ-2024 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜತೆಗೆ ನಿರಂತರವಾಗಿ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ, ದೈಹಿಕ ಶಿಕ್ಷಣ, ಕೌಶಲ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

    ವಕೀಲರ ಸಂಘದ ಅಧ್ಯಕ್ಷ ಶಿವಣ್ಣ ಮಾತನಾಡಿದರು. ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಹಾಡುಗಳಿಗೆ ಪುಟಾಣಿ ಮಕ್ಕಳು ನೃತ್ಯ ಮಾಡಿದರು. ಟ್ರಸ್ಟ್ ಅಧ್ಯಕ್ಷೆ ಸರೋಜಮ್ಮ, ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅರುಣ್ ಕುಮಾರ್, ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ನಾಗೇಗೌಡ, ವರ್ಧಮಾನ ಇಂಟರ್ ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಪಿ. ದೀಪಕ್‌ಗೌಡ, ಮುಖ್ಯಶಿಕ್ಷಕಿ ಶ್ವೇತಾ, ಕೊತ್ತತ್ತಿ ಅನ್ನಪೂರ್ಣೇಶ್ವರಿ ರೈಸ್‌ಮಿಲ್ ಮಾಲೀಕ ಮಹೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts