More

    ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಯಲಿ

    ಗಂಗಾವತಿ: ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ ಕಾರ್ಯಕ್ರಮಗಳಾಗಬೇಕಿದ್ದು, ಮೊಬೈಲ್ ಗೀಳಿನಿಂದ ಹೊರತರಬೇಕಿದೆ ಎಂದು ಗ್ರಾಪಂ ಅಧ್ಯಕ್ಷೆ ಮಂಜುಳಾ ನಾಯಕ ಹೇಳಿದರು.

    ಇದನ್ನೂ ಓದಿ: ಮಕ್ಕಳಿಗೆ ಸಾಹಿತ್ಯಾಭಿರುಚಿ ಬೆಳೆಸಿ

    ತಾಲೂಕಿನ ವಡ್ಡರಹಟ್ಟಿಯ ಶ್ರೀಸಾಯಿಬಾಬಾ ನಗರದ ಜೀವನ್ ಪಬ್ಲಿಕೇಶನ್ಸ್‌ನಿಂದ ಹಮ್ಮಿಕೊಂಡಿದ್ದ ಅರಳು ಕುಸುಮ ಕವಿತೆ ವಾಚನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಮುಮ್ತಾಜ್ ಬೇಗಂ ಮಾತನಾಡಿ, ಸಾಹಿತ್ಯ ಮತ್ತು ಪುಸ್ತಕ ಮುದ್ರಣಕ್ಕೆ ಸೀಮಿತಗೊಳಿಸದೇ ಮಕ್ಕಳಿಗಾಗಿ ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕವನ ವಾಚಿಸಿದರು. ಹೊಸಪೇಟೆ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ಲಕ್ಷ್ಮಿ, ಅತಿಥಿ ಶಿಕ್ಷಕರಾದ ಉಷಾ, ಪ್ರಮೀಳಾ, ನಿವಾಸಿಗಳಾದ ಮಮತಾ ಶರಣಪ್ಪ, ಪ್ರೀತಿಕಿರಣ, ವೆಂಕುಬಾಯಿ, ಕವಿತಾ ಮಲ್ಲನಗೌಡರ್, ಪ್ರಕತಿ, ಕಷ್ಣ, ಸುದೀಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts