

ಚಿತ್ರದುರ್ಗ: ನನ್ನ ಮಗನನ್ನು ಸಾಯಿಸಿದಂತೆ ಅವರನ್ನೂ ಸಾಯಿಸಬೇಕು. ಅವನ್ಯಾವನೋ ದರ್ಶನ್ ಹೀಗೇ ಸಾಯಬೇಕು, ಅವಳೂ ಸಾಯಬೇಕು ಎಂದು ಹತ್ಯೆಗೀಡಾದ ರೇಣುಕಾ ಸ್ವಾಮಿ ತಂದೆ ಕಾಶಿನಾಥ್ ಶಿವಣ್ಣ ಗೌಡರ್, ತಾಯಿ ರತ್ನಪ್ರಭ ಹಿಡಿಶಾಪ ಹಾಕಿದ್ದಾರೆ.
ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 15 ದಿನದೊಳಗೆ ದರ್ಶನ್ ಸಾಯಲಿ. ನಮ್ಮ ವಂಶ ನಿರ್ವಂಶ ಮಾಡಿದ ದರ್ಶನ್ಗೆ ತಕ್ಕ ಶಾಸ್ತಿ ಆಗಲಿ. ನನ್ನ ಮಗನನ್ನು ಕೊಂದಂತೆ ಅವನನ್ನು ಸಾಯಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಂಡ ಬರುತ್ತಾನೆ ಎಂದು ನನ್ನ ಸೊಸೆ ಕಾದು ಕುಳಿತಿದ್ದಳು. ಪಾಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಪವಿತ್ರಾಗೌಡ ವಿರುದ್ಧ ರೇಣುಕಾಸ್ವಾಮಿ ತಾಯಿ ನೋವನ್ನು ಆಕ್ರೋಶ ವ್ಯಕ್ತಪಡಿಸಿದರು.
ರೇಣುಕಾಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆದಿದ್ದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರೇಣುಕಾಸ್ವಾಮಿ ಪೋಷಕರನ್ನ ಕರೆತಂದಿದ್ದರು. ಮಗನ ಮೃತದೇಹದ ಗುರುತು ಪತ್ತೆ ಹಚ್ಚಿದ ಪೋಷಕರು ಮಗನ ಮೃತದೇಹ ಕಂಡು ರೇಣುಕಾಸ್ವಾಮಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ರೇಣುಕಾ ಸ್ವಾಮಿ ತಂದೆ ತಾಯಿ, ಸಹೋದರಿ ಎಂದು ಕಣ್ಣೀರಿಟ್ಟಿದ್ದಾರೆ.
ಈ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಗಳವಾರ ಸಂಜೆ 13 ಜನರನ್ನು ಕೋರ್ಟ್ ಮುಂದೆ ಹಾಜರು ಮಾಡಲಾಗಿದ್ದು ಈ ವೇಳೆ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು 6 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.