More

    ಕುಡಿಯುವ ನೀರಿನ ಸಮಸ್ಯೆ ಆಗದಿರಲಿ

    ಚಿಕ್ಕಮಗಳೂರು: ಬರ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳಲ್ಲಿ ಕುಡಿಯುವ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಕಾರಿಗಳಿಗೆ ಸೂಚನೆ ನೀಡಿದರು.

    ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಬರ ನಿರ್ವಹಣೆಗೆ ಸಂಬಂಸಿದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ 8 ಹೋಬಳಿಗಳು, 47 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮಗಳಲ್ಲಿ ಅಕಾರಿಗಳು ಭೇಟಿನೀಡಿ ಪರಿಶೀಲಿಸಿ ಗ್ರಾಮಗಳಿಗೆ ಅಗತ್ಯ ಮೂಲ ಸೌಲಭ್ಯಗಳ ಮಾಹಿತಿ ಪಡೆಯಬೇಕು ಎಂದರು.
    ಜನ, ಜಾನುವಾರುಗಳಿಗೆ ಆಹಾರ, ಕುಡಿಯುವ ನೀರು, ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎಲ್ಲ ಹೋಬಳಿಗಳಿಗೆ ನೇಮಕವಾಗಿರುವ ನೋಡಲ್ ಅಕಾರಿಗಳು ಆಯಾ ಹೋಬಳಿವಾರು ಸಭೆಗಳನ್ನು ಮಾಡಿ ಅಲ್ಲಿನ ಜನಪ್ರತಿನಿದಿಗಳೊಂದಿಗೆ ಸಭೆ ನಡೆಸಿ ಮೇಲಕಾರಿಗಳಿಗೆ ಸಮಸ್ಯೆ ಗಮನಕ್ಕೆ ತರಬೇಕು. ಆಗ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಸಾಧ್ಯ ಎಂದು ಹೇಳಿದರು.
    ಚಿಕ್ಕಮಗಳೂರು, ಕಸಬಾ, ಲಕ್ಯಾ, ಹೋಬಳಿಗಳಲ್ಲಿ ಬರ ತೀವ್ರತೆ ಹೆಚ್ಚಾಗಿದೆ. ಈ ಪ್ರದೇಶಗಳಲ್ಲಿ ಜಾಗೃತಿ ವಹಿಸಿ ಎಲ್ಲ ಅಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು. ಮೇವು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಕೃಷಿ, ತೋಟಗಾರಿಕೆ ಬೆಳೆಗಳ ನಷ್ಟ ಅಂದಾಜು ಮಾಡಿ ಬೆಳೆ ವಿಮೆಯನ್ನು ರೈತರಿಗೆ ಸಕಾಲದಲ್ಲಿ ಸಿಗುವಂತೆ ನೋಡಿಕೊಳ್ಳಬೇಕು. ನಮ್ಮ ಜಿಲ್ಲೆಯಿಂದ ಬೇರೆಡೆಗೆ ಮೇವು ಸಾಗಿಸುವುದನ್ನು ತಡೆಯಬೇಕು. ಕುಡಿಯುವ ನೀರಿನ ಅಭಾವ ಇರುವ ಕಡೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿಗೆ ವಿದ್ಯುತ್ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
    ಅಂಗನವಾಡಿ, ಶಾಲಾ ಕಾಲೇಜು, ಹಾಸ್ಟೆಲ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಸಂಬಂಧಪಟ್ಟವರು ನಿಗಾ ವಹಿಸಬೇಕು. ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬಂಸಿದ ಎಲ್ಲ ಇಲಾಖೆ ಅಕಾರಿಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸುವ ಅಗತ್ಯವಿದೆ ಎಂದು ಹೇಳಿದರು.
    ತಹಸೀಲ್ದಾರ್ ಡಾ. ಸುಮಂತ್ ಮಾತನಾಡಿ, ಬರಗಾಲ ಇರುವುದರಿಂದ ಎಲ್ಲ ಇಲಾಖೆ ಅಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಸಮನ್ವಯದಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.
    ತಾಪಂ ಇಒ ತಾರಾನಾಥ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಕಾರಿಗಳು, ಗ್ರಾಪಂ ಅಭಿವೃದ್ಧಿ ಅಕಾರಿಗಳು ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts