ಬೇಲೂರು: ಸನಾತನ ಸಂಸ್ಕೃತಿಯನ್ನು ಉಳಿಸುವುದರ ಜತೆಗೆ ಹಿಂದು ಧರ್ಮಪಾಲನೆಯಾಗಬೇಕಾದರೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಬಿಜೆಪಿ ಮುಖಂಡ ಹಗರೆ ಡಿಶಾಂತ್ ಕುಮಾರ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಅಂಗವಾಗಿ ಬೇಲೂರಿನ ಶ್ರೀ ಚೆನ್ನಕೇಶವ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರೂ ಸುಭೀಕ್ಷವಾಗಿ ಬಾಳಬೇಕಾದರೆ ಹಿಂದು ಧರ್ಮ ಗಟ್ಟಿಗೊಳ್ಳಬೇಕಿದೆ. ಈ ಕುರಿತು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದರು.
ಹಿಂದು ಸಂಸ್ಕೃತಿಗೆ ಕೊಡುಗೆ ನೀಡಿದ ಪ್ರಮುಖರ ಭಾವಚಿತ್ರಗಳನ್ನು ಬೈಕ್-ಆಟೋ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿತ್ತು.
ವಿಶ್ವ ಹಿಂದು ಪರಿಷತ್ ಮುಖಂಡ ಗುಂಡ, ಬಿ.ಎಂ.ಸಂತೋಷ್, ಅರುಣ್, ಭರತ್, ಲೋಕೇಶ್, ಸಂತೋಷ್ ಇತರರಿದ್ದರು.