ಗುಳೇದಗುಡ್ಡ: ಡಾ. ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ತಳಹದಿಯ ಮೇಲೆ ಎಲ್ಲರಿಗೂ ಸಮಾನ ಸಂವಿಧಾನಾತ್ಮಕ ಹಕ್ಕುಗಳನ್ನು ನೀಡಿದ್ದಾರೆ. ಸಾಮಾಜಿಕ ವ್ಯವಸ್ಥೆಯಲ್ಲಿ ಎಲ್ಲರೂ ಸ್ವಾಭಿಮಾನದಿಂದ ಬದುಕುತ್ತಿರುವುದಕ್ಕೆ ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣ. ಪ್ರತಿಯೊಬ್ಬರೂ ಸಂವಿಧಾನ ಗೌರವಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.

ಸಮೀಪದ ಅಲ್ಲೂರು ಎಸ್‌ಪಿ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮತಿ, ಭೀಮವಾದ ಗ್ರಾಮ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಅಸ್ಪಶ್ಯತೆ ವಿರುದ್ಧ ಹೋರಾಡಿ ಶೋಷಿತರಿಗೆ ನ್ಯಾಯ ಒದಗಿಸಿ, ಸಮಾಜದಲ್ಲಿ ಎಲ್ಲರೂ ಸಮಾನವಾಗಿ ಬದುಕಬೇಕು ಎಂದು ಕನಸು ಕಂಡವರು. ದೇಶಕ್ಕೆ ಸಂವಿಧಾನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕು ಎಂದರು.
ಜಿಪಂ ಮಾಜಿ ಸದಸ್ಯ ಆಸಂಗೆಪ್ಪ ನಕ್ಕರಗುಂದಿ ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಹಿಂದುಳಿದವರಿಗೆ ಸಮಾನ ಆವಕಾಶ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರವುದೇ ಅಂಬೇಡ್ಕರ ಅವರು ರಚಿಸಿದ ಸಂವಿಧಾನದ ಗುರಿಯಾಗಿದೆ ಎಂದರು.
ಗ್ರಾಮದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ಕುಂಭಮೇಳದೊಂದಿಗೆ ಅದ್ದೂರಿಯಾಗಿ ನಡೆಯಿತು.
ಚಂದ್ರಶೇಖರ ಗೌಡರ, ಸಿಂಧೂರ ಕೊಳಮಲಿ, ಮರಿತೊಮಪ್ಪ ತಿಮ್ಮಣ್ಣವರ, ಭೀಮನಗೌಡ ಗೌಡರ, ಬಸಯ್ಯ ಮಾಚಕನೂರಮಠ, ಶಿವಲಿಂಗಯ್ಯ ಹಿರೇಮಠ, ಶಿವಾನಂದ ಚಲವಾದಿ, ನಾಗಪ್ಪ ಚಲವಾದಿ, ಲಕ್ಷ್ಮಣ ಚಲವಾದಿ, ಹನಮಂತಪ್ಪ ಚಲವಾದಿ, ರುದ್ರಪ್ಪ ಚಲವಾದಿ, ಸಂಗನಬಸಪ್ಪ ಚಲವಾದಿ, ರಾಯಪ್ಪ ಚಲವಾದಿ, ಸಮಿತಿ ಅಧ್ಯಕ್ಷ ನಿಂಗಪ್ಪ ಚಲವಾದಿ, ಉಪಾಧ್ಯಕ್ಷ ಮಂಜುನಾಥ ಚಲುವಾದಿ, ಸಂಗಮೇಶ ಚಲವಾದಿ, ದ್ಯಾಮಣ್ಣ ಚಲವಾದಿ, ಸಂಗಪ್ಪ ಚಲವಾದಿ, ಯಮನೂರ ಚಲವಾದಿ ಮತ್ತಿತರರು ಇದ್ದರು.