More

    ಮಹಿಳೆಯ ಸಾಧನೆ ಗುರುತಿಸುವ ಕೆಲಸವಾಗಲಿ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಭಾರತೀಯ ರಾಜಕೀಯದಲ್ಲಿ ಮಹಿಳೆಗೆ ಮಹತ್ವದ ಸ್ಥಾನಮಾನಗಳನ್ನು ನೀಡಲಾಗಿದೆ ಎಂದು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯ ಹಿರಿಯ ಪ್ರಾಧ್ಯಾಪಕಿ ಡಾ. ರತ್ನಾ ಭರಮಗೌಡರ ಹೇಳಿದರು.
    ನಗರದ ಕರ್ನಾಟಕ ವಿಶ್ವ ವಿದ್ಯಾಲಯದ ಮಹಿಳಾ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು ಮಹಿಳಾ ಅಧ್ಯಯನ ವಿಭಾಗಗಳ ವತಿಯಿಂದ ಮಹಿಳಾ ದಿನ ನಿಮಿತ್ತ ಕವಿವಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ವಿಚಾರ ಸಂಕಿರಣ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
    ಇತಿಹಾಸವನ್ನು ಅವಲೋಕಿಸಿದಾಗ ಅನೇಕ ಮಹಿಳೆಯರು ರಾಜಕೀಯದಲ್ಲಿ ಸಾಧನೆ ಮಾಡಿದ್ದಾರೆ. ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾಳೆ. ಆದರೆ ಮಹಿಳೆ ಎಷ್ಟೇ ಸಾಧನೆ ಮಾಡಿದ್ದರೂ ಅವಳ ಸಾಧನೆಯನ್ನು ಸರಿಯಾಗಿ ಗುರುತಿಸುತ್ತಿಲ್ಲ ಎಂಬುದೇ ವಿಪರ್ಯಾಸ ಎಂದರು.
    ಮಧುಸ್ವಿನಿ ದೇಸಾಯಿ ಮಾತನಾಡಿ, ಮಹಿಳೆಯರಿಗೆ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಉದ್ಯಮ ಸ್ಥಾಪನೆ ಗೆ ಬ್ಯಾಂಕ್​ಗಳಲ್ಲಿ ಸಾಲ ನೀಡಲಾಗುತ್ತದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
    ಜಯಶ್ರೀ ಎಸ್​. ಅಧ್ಯಕ್ಷತೆ ವಹಿಸಿದ್ದರು. ಕವಿವಿ ಮಹಿಳಾ ಅಧ್ಯಯನ ಸಂಶೋಧನೆ ಕೇಂದ್ರದ ನಿರ್ದೇಶಕಿ ಡಾ. ಸಂಗೀತಾ ಮಾನೆ ವರದಿ ಮಂಡಿಸಿದರು. 2 ದಿನಗಳ ಕಾಲ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ವಿವಿಧ ವಿಷಯಗಳ ಕುರಿತು 62 ಸಂಶೋಧಕರು ಪ್ರಬಂಧ ಮಂಡಿಸಿದರು. ಉತ್ತಮ ಪ್ರಬಂಧ ಮಂಡನೆಗೆ ಹಾಗೂ ಸಾಂಸತಿಕ ಕಾರ್ಯಕ್ರಮ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
    ಶ್ಯಾಮಲಾ ರತ್ನಾಕರ, ಡಾ. ಶ್ಯಾಮಕುಮಾರ, ವೀಣಾ ಬಿರಾದಾರ, ಡಾ.ಸಂಗೀತಾ ಮಾನೆ, ಡಾ.ಪುಷ್ಪಾ ಹೊಂಗಲ, ವಿದ್ಯಾಥಿರ್ಗಳು, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts