More

    ಕನ್ನಡಕ್ಕೆ ಮೊದಲ ಆದ್ಯತೆ ಸಿಗಲಿ

    ಪಾಂಡವಪುರ: ಸರ್ಕಾರಿ ಕಚೇರಿ, ಬ್ಯಾಂಕ್‌ಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಕೆಪಿಪಿಸಿ ಸದಸ್ಯ ಎಚ್.ತ್ಯಾಗರಾಜು ಆಗ್ರಹಿಸಿದರು.

    ಪಟ್ಟಣದ ಕಸಾಪ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಕಚೇರಿ, ಬ್ಯಾಂಕ್‌ಗಳಲ್ಲಿ ಕನ್ನಡ ಕಣ್ಮರೆಯಾಗುತ್ತಿದೆ. ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ಬಹುತೇಕ ಅಧಿಕಾರಿಗಳಿಗೆ ಕನ್ನಡವೇ ಬರುವುದಿಲ್ಲ. ಇದರಿಂದ ಜನರಿಗೆ ಕಷ್ಟವಾಗುತ್ತಿದೆ ಎಂದರು.

    ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್ ಮಾತನಾಡಿ, ಕನ್ನಡಕ್ಕೆ ಸುಮಾರು 2 ಸಾವಿರ ವರ್ಷದ ಇತಿಹಾಸವಿದೆ. ಕನ್ನಡ ಭಾಷೆ, ಸಾಹಿತ್ಯ ಶ್ರೀಮಂತವಾಗಿದೆ. ಕರ್ನಾಟಕದಲ್ಲಿ ಜನಿಸಿರುವ ಪ್ರತಿಯೊಬ್ಬರೂ ಕನ್ನಡ ರಾಜ್ಯೋತ್ಸವವನ್ನು ಮನೆಯ ಹಬ್ಬದಂತೆ ಆಚರಣೆ ಮಾಡಬೇಕು ಎಂದು ಹೇಳಿದರು.

    ರೈತಸಂಘದ ಅಧ್ಯಕ್ಷ ನಾಗರಾಜು, ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಕಸಾಪ ಅಧ್ಯಕ್ಷ ಮೇನಾಗ್ರ ಪ್ರಕಾಶ್, ಡಾ.ಕೃಷ್ಣೇಗೌಡ ಹುಸ್ಕೂರು, ಡಾ.ಎಂ.ವೈ.ಶಿವರಾಮು, ಬಿಜೆಪಿ ಮುಖಂಡ ಎಚ್.ಎನ್.ಮಂಜುನಾಥ್, ಹಾಸ್ಯನಟ ಗಿಲ್ಲಿನಟ, ಎಚ್.ಎಸ್.ಮಂಜುನಾಥ್, ಉದ್ಯಮಿ ಲಾರಿ ವೆಂಕಟೇಶ್, ನಿವೃತ್ತ ಶಿಕ್ಷಕ ಚಂದ್ರಶೇಖರಯ್ಯ, ವೆಂಕಟೇಶ್ ಎರೇಗೌಡನಹಳ್ಳಿ, ಶಿವರಾಜು, ಮಂಜುನಾಥ್, ಶ್ರುತಿ, ಧರ್ಮರತ್ನಾಕರ್, ಚಿಕ್ಕಾಡೆ ಶ್ರೀನಿವಾಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts