More

    ಪುರುಷರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿ

    ಇಂಡಿ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವೀಪರೀತ ಜನಸಂಖ್ಯೆ ನಿಯಂತ್ರಿಸುವಲ್ಲಿ ನಮ್ಮ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು. ಮಹಿಳೆಯರು ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಸಂತಾನ ಶಕ್ತಿ ಹರಣ ಶಸಚಿಕಿತ್ಸೆಗೆ ಒಳಪಡುತ್ತಿದ್ದಾರೆ.ಪುರುಷ ಸಂತಾನ ಹರಣ ಶಸಚಿಕಿತ್ಸೆ ಕೇವಲ ಬೆರಳೆಣಿಕೆಯಷ್ಟು ಇದ್ದು ಮುಂದಿನ ದಿನಗಳಲ್ಲಿ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಶಸಚಿಕಿತ್ಸೆಯನ್ನು ಮಾಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಅರ್ಚನಾ ಕುಲಕರ್ಣಿ ಹೇಳಿದರು.

    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ದೈಹಿಕ ಶಿಕ್ಷಣಾಧಿಕಾರಿ ಎ.ಎಸ್.ಲಾಳಸೇರಿ ಮಾತನಾಡಿ, ಪ್ರಸ್ತುತ ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಅತ್ಯಾವಶ್ಯಕವಾಗಿದ್ದು, ಜನಸಂಖ್ಯಾ ನಿಯಂತ್ರಣದ ಕುರಿತು ಯುವ ಜನಾಂಗಕ್ಕೆ ಶಿಕ್ಷಣ ನೀಡುವದು. ಜೊತೆಗೆ ಜನಸಂಖ್ಯಾ ಹೆಚ್ಚಳದಿಂದಾಗುವ ಸಾಮಾಜಿಕ ಗ್ರಾಮೀಣ ಭಾಗದ ಅಜ್ಞಾನ, ಬಡತನ, ಮೂಢನಂಬಿಕೆ, ಬಾಲ್ಯ ವಿವಾಹ ತಡೆಗಟ್ಟುವದು ಲಿಂಗ ತಾರತಮ್ಯ ನಿವಾರಿಸಲು ಇಲಾಖೆಯಿಂದ ಅರಿವು ಮೂಡಿಸಲು ಜನಜಾಗತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಇದನ್ನೂ ಓದಿ : ಕೇವಲ 1.5 ಕಿಮೀ ರಸ್ತೆಗೆ 6 ಕೋಟಿಗೂ ಅಧಿಕ ವೆಚ್ಚ, ಅಂದಾಜು ಮೊತ್ತ ಹೆಚ್ಚಿಸಿ ಭ್ರಷ್ಟಾಚಾರ?

    ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ ಮಾತನಾಡಿ ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವದು, ಅದರಲ್ಲೂ ಮಹಿಳೆಯರು ಬರಿ ದುಡಿಮೆ ಹಾಗೂ ಸಂಸಾರಿಕ ಬಂದನದಲ್ಲಿ ಸಮಯ ವ್ಯರ್ಥ ಮಾಡಬಾರದು. ಬದಲಾಗಿ ತಮಗಿರುವ ಸ್ಥಾನಮಾನ ಹಾಗೂ ಆರೋಗ್ಯದ ಸ್ಥಿತಿ ಗತಿ, ಹೆಚ್ಚು ಮಕ್ಕಳು ಹೆರುವುದರಿಂದ ಆಗುವ ದುಷ್ಪರಿಣಾಮ ಬಾಣಂತನದ ಸಂದರ್ಭದಲ್ಲಿ ತಾಯಿ ಮಗುವಿಗೆ ಬರುವ ಮಾರಣಾಂತಿಕ ಕಾಯಿಲೆಗಳ ಬಗ್ಗೆ ಜಾಗತಿ ವಹಿಸಬೇಕು ತಾಯಿ ಮಗು ಸದಢವಾಗಿದ್ದರೆ ಕುಟುಂಬ ಸದಢ ಪ್ರತಿಯೊಂದು ಕುಟುಂಬ ಸದಢವಾಗಿದ್ದರೆ ಇಡೀ ದೇಶ ಸದಢವಾಗಿರಲು ಸಾಧ್ಯ ಎಂದು ಹೇಳಿದರು.

    ಕ್ಷಯರೋಗ ವಿಭಾಗದ ಬಸವರಾಜ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts