More

    ಮುಂಜಾಗ್ರತಾ ಕ್ರಮ ಮತ್ತಷ್ಟು ಪರಿಣಾಮಕಾರಿಯಾಗಿರಲಿ

    ಚಾಮರಾಜನಗರ: ಮಹಾಮಾರಿ ಕರೊನಾ ತಡೆಗಟ್ಟಲು ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿ ಜನರ ಆರೋಗ್ಯ ಕಾಪಾಡಬೇಕು ಎಂದು ಸಂಸದ ಶ್ರೀನಿವಾಸಪ್ರಸಾದ್ ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ತಡೆಗಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕೋವಿಡ್-19 ವ್ಯಾಪಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ. ಪರಸ್ಪರ ಅಂತರ, ಮಾಸ್ಕ್ ಧರಿಸುವಿಕೆ, ವೈಯಕ್ತಿಕ ಶುಚಿತ್ವ ಮತ್ತಿತರ ಪರಿಣಾಮಕಾರಿ ವಿಧಾನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಆಗಬೇಕಿದೆ ಎಂದರು.

    ಜಿಲ್ಲೆಯಲ್ಲಿ ಆರೋಗ್ಯ ಪೂರಕ ಕಾರ್ಯಕ್ರಮಗಳು ಜನರ ಹಿತದೃಷ್ಟಿಯಿಂದ ನಡೆಸಬೇಕು. ಎಲ್ಲ ಭಾಗಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಅರಿವು ಮುಡಿಸಬೇಕು. ಕೋವಿಡ್-19 ಆಸ್ಪತ್ರೆ ಸ್ಥಾಪನೆ, ಫೀವರ್ ಕ್ಲಿನಿಕ್‌ಗಳ ಕಾರ್ಯ, ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರಂಭಿಸಿರುವ ಪಿಸಿಆರ್ ಪ್ರಯೋಗಾಲಯ ಕಾರ್ಯವೈಖರಿಯನ್ನು ಪರಿಶೀಲಿಸಿದ ಸಂದ ವಿ.ಶ್ರೀನಿವಾಸಪ್ರಸಾದ್, ಸುಸಜ್ಜಿತ ವ್ಯವಸ್ಥೆಗಳು, ಸೌಲಭ್ಯಗಳು ಜಿಲ್ಲೆಯಲ್ಲಿಯೇ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ಹೆಚ್ಚು ಗಮನ ನೀಡಿದೆ ಎಂದರು.

    ಶಾಸಕ ಎನ್.ಮಹೇಶ್, ಜಿಪಂ ಪ್ರಭಾರ ಅಧ್ಯಕ್ಷ ಕೆ.ಎಸ್.ಮಹೇಶ್, ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಉಪವಿಭಾಗಾಕಾರಿ ನಿಖಿತಾ ಎಂ.ಚಿನ್ನಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಜಿಲ್ಲಾ ಆಸ್ಪತ್ರೆಯ ಡೀನ್ ಡಾ. ಸಂಜೀವ್ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


    ಜಿಲ್ಲೆಯಲ್ಲಿ ಕೊವಿಡ್ ತಡೆಗೆ ಆರಂಭದಿಂದಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುಲಾಗುತ್ತಿದೆ. ಸಾಂಸ್ಥಿಕ ಕ್ವಾರಂಟೈನ್, ಚೆಕ್‌ಪೋಸ್ಟ್‌ಗಳಲ್ಲಿ ಬಿಗಿಕಣ್ಗಾವಲು, ಆರೋಗ್ಯ ಸಮೀಕ್ಷೆ ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ. ಲಾಕ್‌ಡೌನ್ ಅವಧಿಯಲ್ಲಿ ಜನರ ಅಗತ್ಯತೆಗಳಿಗೆ ಸ್ಪಂದಿಸಲಾಗುತ್ತಿದೆ. ಜನರು ಸಹ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲ ಕ್ರಮಗಳಿಗೆ ಪೂರಕವಾಗಿ ಸಹಕಾರ ನೀಡುತ್ತಿದ್ದಾರೆ.
    ಡಾ.ಎಂ.ಆರ್.ರವಿ, ಜಿಲ್ಲಾಧಿಕಾರಿ

    .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts