More

    ಗುಣಮಟ್ಟದ ರಸ್ತೆ ನಿರ್ಮಾಣವಾಗಲಿ

    ಗೋಣಿಕೊಪ್ಪ: ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರ ಪ್ರಮುಖ ಬೇಡಿಕೆಯಾದ ಹರಿಹರ ನಾಲ್ಕೇರಿ ಸಂಪರ್ಕ ರಸ್ತೆ ಅಭಿವೃದ್ಧಿಗೆ 2 ಕೋಟಿ ರೂ. ಅನುದಾನ ಮಂಜುರಾಗಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗೆ ಚಾಲನೆ ನೀಡಿದರು.

    ರಸ್ತೆ ಅಭಿವೃದ್ಧಿಗಾಗಿ ಇಲ್ಲಿನ ನಾಗರಿಕರು ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದರು. ಆದರೆ ನಾನಾ ಕಾರಣಗಳಿಂದ ಕಾಮಗಾರಿ ಆರಂಭವಾಗಿರಲಿಲ್ಲ. ಇದೀಗ ರಸ್ತೆ ಅಭಿವೃದ್ಧಿಗೆ ಸರ್ಕಾರ ಹಣ ಮಂಜೂರು ಮಾಡಿದೆ. ಇದರಿಂದ ಹರಿಹರ, ನಾಲ್ಕೇರಿ ಸಂಪರ್ಕಿಸುವ ರಸ್ತೆ ಉತ್ತಮಗೊಳ್ಳಲಿದೆ. ಕಾಮಗಾರಿ ಸಂದರ್ಭ ಸ್ಥಳೀಯ ಗ್ರಾಮಸ್ಥರು ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಅಲ್ಲದೆ ರಸ್ತೆಯ 2 ಬದಿಯಲ್ಲಿಯೂ ವಿಸ್ತರಣೆ ಸಂದರ್ಭ ತೋಟದ ಮಾಲೀಕರು ರಸ್ತೆ ಬದಿಯ ಜಾಗವನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಡುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು. ಇದರಿಂದ ಕೆಲಸ ನಿರ್ವಹಿಸುವ ಗುತ್ತಿಗೆದಾರರಿಗೆ ಅನುಕೂಲ ಆಗಲಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಮೂಲ್ಯ ಎಂದರು.

    ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಮಾತನಾಡಿ, ಈ ಹಿಂದೆ ಲೋಕೋಪಯೋಗಿ ಸಚಿವರಾದ ಮಹದೇವಪ್ಪ ಅವರು ಈ ಪ್ರಮುಖ ಸಂಪರ್ಕ ರಸ್ತೆಗೆ ಅನುದಾನ ಬಿಡುಗಡೆಗೊಳಿಸಿದ್ದರು. ಆದರೆ ಕಾಮಗಾರಿ ಆರಂಭವಾಗಿರಲಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದ್ದರೂ ರಸ್ತೆ ಅಭಿವೃದ್ಧಿಗೆ ಗುತ್ತಿಗೆದಾರರು ಮುಂದೆ ಬಂದಿರಲಿಲ್ಲ. ಇದೀಗ ಶಾಸಕ ಪೊನ್ನಣ್ಣ ಅವರ ವಿಶೇಷ ಕಾಳಜಿಯಿಂದ ಲೋಕೋಪಯೋಗಿ ಸಚಿವರ ಗಮನ ಸೆಳೆಯುವ ಮೂಲಕ ಅನುದಾನ ಮಂಜೂರಾಗಿದೆ. ಈ ರಸ್ತೆಯಿಂದ ಗ್ರಾಮದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

    ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಡಿಸಿಸಿ ಸದಸ್ಯರಾದ ಮುಕ್ಕಾಟೀರ ಸಂದೀಪ್, ಕಾಳಿಮಾಡ ಪ್ರಶಾಂತ್, ತಾಪಂ ಮಾಜಿ ಸದಸ್ಯ ಪಲ್ವೀನ್ ಪೂಣಚ್ಚ, ಜಿಪಂ ಮಾಜಿ ಸದಸ್ಯ ಬಿ.ಎನ್.ಪ್ರಥ್ವಿ, ಮುಖಂಡರಾದ ಪೆಮ್ಮಂಡ ಪೊನ್ನಪ್ಪ, ಅಪ್ಪಚಂಗಡ ಮೋಟಯ್ಯ, ಪೆಮ್ಮಣಮಾಡ ಸತೀಶ್, ದರ್ಶನ್, ನಿವೃತ್ತ ಪ್ರಾಂಶುಪಾಲ ಬಾಚಿರ ಕಾರ್ಯಪ್ಪ, ಕಟ್ಟೆರ ಬಾಬು, ಕಟ್ಟೆರ ಕುಶಾಲಪ್ಪ, ಮುಕ್ಕಾಟೀರ ವಿನು, ಪೊನ್ನಪ್ಪ, ಮತ್ರಂಡ ದಿಲ್ಲು, ತೀತಿರ ಜೀವನ್, ಚೊಟ್ಟೆಯಂಡಮಾಡ ಉದಯ, ಕಟ್ಟಿ ಕಾರ್ಯಪ್ಪ, ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಚಂಗುಲಂಡ ಸೂರಜ್, ತೀತಿರ ಅನಿತಾ, ಮನ್ನೇರ ರಮೇಶ್, ಅಲ್ಲುಮಾಡ ಮುತ್ತಪ್ಪ, ನೂರೆರ ಮನೋಹರ್, ಪರಮಾಲೆ ಗಣೇಶ್ ಬಿ.ಎನ್.ಪ್ರಥ್ವಿ, ಪೆಮ್ಮಂಡ ರಾಜ, ಶಾಜಿ ಅಚ್ಚುತ್ತನ್ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts