More

    ರಾಜ್ಯೋತ್ಸವ ನಿತ್ಯೋತ್ಸವವಾಗಲಿ

    ಹಾಸನ : ಸುವರ್ಣ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕರವೇ(ಪ್ರವೀಣ್‌ಶೆಟ್ಟಿ)ಬಣದಿಂದ ಬೇಲೂರು ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸುವ ಮೂಲಕ ಬುಧವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.


    • ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮ ಆಚರಿಸುತ್ತಿರುವ ನಾವು ಕೇವಲ ಒಂದು ದಿನಕ್ಕೆ ಕನ್ನಡ ಹಬ್ಬವನ್ನು ಆಚರಿಸಿ ಸುಮ್ಮನಾಗಬಾರದು. ಇದು ಪ್ರತಿನಿತ್ಯ ನಿತ್ಯೋತ್ಸವವಾಗಬೇಕು. ಕನ್ನಡ ನಾಡು, ನುಡಿ, ನೆಲ ಜಲಕ್ಕಾಗಿ ಕೇವಲ ಸಂಘಟನೆಗಳು ಹೋರಾಡಿದರೆ ಸಾಲದು 7 ಕೋಟಿ ಕನ್ನಡಿಗರೂ ಹೋರಾಟಕ್ಕೆ ಮುಂದಾದಾಗ ಮಾತ್ರ ಪ್ರತಿಫಲ ಪಡೆಯಲು ಸಾಧ್ಯ. ಜತೆಗೆ ನಮ್ಮ ಮಾತೃಭಾಷೆಯನ್ನು ಪ್ರತಿಯೊಬ್ಬರೂ ಬಳಸಿ, ಬೆಳೆಸಬೇಕು ಎಂದರು.

    • ಕರವೇ ತಾಲೂಕು ಅಧ್ಯಕ್ಷ ವಿ.ಎಸ್.ಭೋಜೇಗೌಡ ಮಾತನಾಡಿ, ಪ್ರತಿ ವರ್ಷ ನಮ್ಮ ಸಂಘಟನೆಯಿಂದ ವಿಶೇಷವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ನಮ್ಮ ನಾಡಿನಲ್ಲಿ ಮೊದಲು ನಾವು ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ನಮ್ಮ ಅಕ್ಕ ಪಕ್ಕದ ರಾಜ್ಯಗಳಲ್ಲಿ ಅವರ ಭಾಷೆಗೆ ಪ್ರಾಶಸ್ತ್ಯ ಕೊಡುತ್ತಾರೆ. ಆದರೆ ನಮ್ಮಲ್ಲಿರುವವರು ವ್ಯಾಪಾರ-ವಹಿವಾಟು ಸಂದರ್ಭ ಬೇರೆ ಭಾಷೆಯಲ್ಲಿ ಮಾತನಾಡುವುದು ಸರಿಯಲ್ಲ ಮತ್ತು ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಮಾಯವಾಗಿದೆ. ಅದರಲ್ಲೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡ ಹುಡುಕುವಂತಾಗಿದೆ. ರಾಜ್ಯದಲ್ಲಿ ಸಾರ್ವಜನಿಕವಾಗಿ ಸೇವೆ ಸಲ್ಲಿಸುವ ಸರ್ಕಾರಿ ಕಚೇರಿಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದರು.

    • ಕರವೇ ತಾಲೂಕು ಉಪಾಧ್ಯಕ್ಷ ಅರುಣ್‌ಸಿಂಗ್, ಯುವ ಘಟಕದ ಅಧ್ಯಕ್ಷ ಸತೀಶ್, ಮುಖಂಡರಾದ ಮೋಹಿತ್, ರಾಕೇಶ್, ಸತೀಶ್, ಚಂದ್ರು, ಕಸಾಪ ಗೌರವ ಕಾರ್ಯದರ್ಶಿ ಮಹೇಶ್, ವಕೀಲರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿಗೌಡ, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಆರಾಧ್ಯ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts