More

    ವಿದ್ಯಾರ್ಥಿಗಳು ರಾಷ್ಟ ನಿರ್ಮಾಣಕ್ಕೆ ಶಕ್ತಿಯಾಗಲಿ

    • ಮಡಿಕೇರಿ: ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣಕ್ಕೆ ಶಕ್ತಿಯಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅಭಿಪ್ರಾಯಪಟ್ಟರು.

    • ಶನಿವಾರಸಂತೆ ಸಮೀಪದ ಆಲೂರು- ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆ ಮಾನವೀಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಮಾದರಿ ವ್ಯಕ್ತಿತ್ವ ನಿರ್ಮಾಣವಾಗಲು ಇದು ಸಹಕಾರಿಯಾಗುತ್ತದೆ ಎಂದರು.

    • ಪ್ರತಿಯೊಬ್ಬರೂ ಆಧ್ಯಾತ್ಮಿಕ ಚಿಂತನೆ ಬೆಳೆಸಿಕೊಳ್ಳಬೇಕು. ಈ ಮೂಲಕ ಸ್ವಾಸ್ಥೃ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಇದಲ್ಲದೆ, ವಿದ್ಯಾರ್ಥಿಗಳಿಗೆ ಪಠ್ಯ, ಕ್ರೀಡೆ, ಸಾಂಸ್ಕೃತಿಕ ಶಿಕ್ಷಣದ ಜತೆ ಸಾಮಾಜಿಕ ಮೌಲ್ಯಗಳನ್ನು ಶಿಕ್ಷಕರು ಹೇಳಿಕೊಡಬೇಕು ಎಂದು ಸಲಹೆ ನೀಡಿದರು.
    • ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿನಯ್, ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ರಾಜ್ಯ ಶಿಕ್ಷಕರ ಸಂಘಟನೆಯ ಮಾಜಿ ಕಾರ್ಯದರ್ಶಿ ಕೆ.ಕೆ.ಮಂಜುನಾಥ್‌ಕುಮಾರ್, ಗ್ರಾ.ಪಂ. ಸದಸ್ಯರಾದ ಸತೀಶ್‌ಕುಮಾರ್, ದಮಯಂತಿ ಕರುಂಬಯ್ಯ, ಲೀಲಮ್ಮ, ಮಲ್ಲಪ್ಪ, ಪಿಡಿಒ ಹರೀಶ್, ಪ.ಪೂ.ಕಾಲೇಜು ಪ್ರಾಂಶುಪಾಲ ಕೆ.ಎಂ.ಚಂದ್ರಶೇಖರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಣಪತಿ, ಜಾನಕಿ ಕಾಳಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts