More

    ಗುಣಮಟ್ಟ ಶಿಕ್ಷಣಕ್ಕೆ ಶಿಕ್ಷಕರು ಆದ್ಯತೆ ನೀಡಲಿ

    ಕೆ.ಆರ್.ನಗರ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರಾಥಮಿಕ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಡಿ.ರವಿಶಂಕರ್ ಸಲಹೆ ಹೇಳಿದರು.

    ಪಟ್ಟಣದ ಮಧುವನಹಳ್ಳಿ ಬಡಾವಣೆಯ ಕುಮಾರಿ ನಿರ್ಮಲಾ ಜಯರಾಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದರು.

    ಶೈಕ್ಷಣಿಕ ಪ್ರಗತಿಯೊಂದಿಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ. ಹಾಗಾಗಿ ಹಿಂಜರಿಕೆ ಬಿಟ್ಟು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ, ಸಂಸ್ಥೆಯ ಸಂಸ್ಥಾಪನಾ ಕಾರ್ಯದರ್ಶಿ ಜಿ.ಆರ್.ರಾಮೇಗೌಡ, ನಿರ್ದೇಶಕ ಮಾರ್ಚಹಳ್ಳಿ ಶಿವರಾಮು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಪುರಸಭಾ ಸದಸ್ಯ ನಟರಾಜ್ ಮಾತನಾಡಿದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಸಂಸ್ಥೆಯ ನಿರ್ದೇಶಕರಾದ ಸಿದ್ದೇಗೌಡ, ಸ್ವಾಮಿಗೌಡ, ಇಸಿಒಗಳಾದ ಜೆ.ಜಗದೀಶ್, ದಾಸಪ್ಪ, ಜನಾದರ್ನ್, ಸಿಆರ್‌ಪಿಗಳಾದ ಎಚ್.ಎಸ್.ಈಶ್ವರ, ವಸಂತ್‌ಕುಮಾರ್, ಮಾನವ ಹಕ್ಕುಗಳ ಆಯೋಗದ ತಾಲೂಕು ಅಧ್ಯಕ್ಷ ಮಹದೇವ, ಕುಮಾರಿ ನಿರ್ಮಲ ಜಯರಾಂ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಜಿ.ಜೆ.ರೇವಣ್ಣ, ಶಿಕ್ಷಕರಾದ ಚಕ್ರಪಾಣಿ, ಜಯಶ್ರೀ ಅಯ್ಯಣ್ಣ, ಪುಷ್ಪಲತಾ, ಯಶೋದಾ, ನೀಲು, ಸಂಗೀತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts