More

    ಬದುಕು ಕಟ್ಟಿಕೊಳ್ಳುವತ್ತ ಮದ್ಯವಸನಿಗಳು ಗಮಮಹರಿಸಲಿ

    ನಂಜನಗೂಡು: ಕುಡಿತದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಹಾಳಾಗುವುದರ ಜತೆಗೆ ಕುಟುಂಬ ಬೀದಿ ಪಾಲಾಗುತ್ತದೆ. ಹೀಗಾಗಿ, ಕುಡಿತದ ಚಟ ಬಿಟ್ಟು ಬದುಕು ಕಟ್ಟಿಕೊಳ್ಳುವತ್ತ ಮದ್ಯವ್ಯಸನಿಗಳು ಗಮನಹರಿಸಬೇಕು ಎಂದು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ ಹೇಳಿದರು.

    ನಗರದ ಮಂಗಳಮಂಟಪದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ 1739ನೇ ಮಧ್ಯವರ್ಜನ ಶಿಬಿರದ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಉತ್ತಮ ವ್ಯಕ್ತಿತ್ವ ಹೊಂದಬೇಕಾದರೆ ಮದ್ಯವ್ಯಸನಿಗಳು ಕುಡಿತದ ಚಟದಿಂದ ಹೊರ ಬರಬೇಕು ಎಂದು ಸಲಹೆ ನೀಡಿದರು.

    ಕೃಷಿ ಚಟುವಟಿಕೆಗೆ ನೆರವಾಗುವಂತೆ ಹಲವು ಯೋಜನೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾರಿಗೊಳಿಸಿದ್ದು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೂ ಕೊಡುಗೆ ನೀಡಿದೆ. ಇದರೊಂದಿಗೆ ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಮದ್ಯ ಸೇವನೆಯಿಂದ ಆಗುವ ಅನಾಹುತದ ಬಗ್ಗೆ ಶಿಬಿರದಲ್ಲಿ ಉಪನ್ಯಾಸ ನೀಡಲಾಯಿತು. ಮಕ್ಕಳ ಮನೆ ಸಂಸ್ಥೆಯ ಅಧ್ಯಕ್ಷ ಡಿ.ಜೆ.ಸೋಮಶೇಖರ್, ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ್, ಜನಜಾಗೃತಿ ಸಮಿತಿ ಉಪಾಧ್ಯಕ್ಷ ಎಸ್‌ಎಲ್‌ಎಸ್ ಮೂರ್ತಿ, ಲಕ್ಷ್ಮಣ್, ಗೋವಿಂದಾಚಾರ್, ಡಾ.ಅನಿತಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಲತಾ ಮುದ್ದುಮೋಹನ್ ಹಲವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts