More

    ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳಲಿ

    ಬಾದಾಮಿ: ತಾಲೂಕಿನಾದ್ಯಂತ ಮಾ.25 ರಿಂದ ಏ.6 ವರೆಗೆ ಜರುಗಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಜೆ.ಬಿ.ಮಜ್ಜಗಿ ಸೂಚಿಸಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾಲೂಕುಮಟ್ಟದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ತಾಲೂಕಿನ ಎಲ್ಲ 14 ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆಯ ಪಾವಿತ್ರೃತೆ, ಗೌಪ್ಯತೆ ಕಾಪಾಡಿಕೊಂಡು ಪರೀಕ್ಷೆ ನಡೆಸಬೇಕು. ತಾಲೂಕಿನ ಯಾವುದೇ ಮಗು ಪರೀಕ್ಷೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಸ್ನೇಹಿಯಾಗಿ ಯಾವುದೇ ಅವ್ಯವಹಾರಕ್ಕೆ ಆಸ್ಪದ ನೀಡದೆ ಪರೀಕ್ಷೆ ನಡೆಸಬೇಕು ಎಂದು ಮುಖ್ಯ ಅಧೀಕ್ಷಕರಿಗೆ ಸೂಚಿಸಿದರು.

    ಬಿಇಒ ಎನ್.ವೈ.ಕುಂದರಗಿ ಮಾತನಾಡಿ, ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5,374 ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾ, ಕುಡಿಯುವ ನೀರು, ಶೌಚಗೃಹ ಹಾಗೂ ಮಕ್ಕಳಿಗೆ ಆಸನದ ವ್ಯವಸ್ಥೆ ಸೇರಿ ಎಲ್ಲ ರೀತಿಯ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರ್ಷ ಹೊಸದಾಗಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಅಳವಡಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕೆಂದು ಅಧೀಕ್ಷಕರಿಗೆ ಸೂಚಿಸಿದರು.

    ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಿದ್ದು, 229 ಬ್ಲಾಕ್, 14 ಮುಖ್ಯ ಅಧೀಕ್ಷಕರು, 14 ಉಪಮುಖ್ಯ ಅಧೀಕ್ಷಕರು, 14 ಕಸ್ಟೋಡಿಯನ್, 229 ಕೊಠಡಿ ಮೇಲ್ವಿಚಾರಕರು, 14 ಪ್ರಶ್ನೆಪತ್ರಿಕೆ ಪಾಲಕರನ್ನು ನೇಮಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಣೆಗೆ 5 ಮಾರ್ಗಗಳನ್ನು ಮಾಡಿಕೊಂಡಿದ್ದು, 5 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

    ಪಿಎಸ್‌ಐ ವಿಠ್ಠಲ ನಾಯಕ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನವರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ಎಚ್.ಹಳಗೇರಿ, ಪರೀಕ್ಷಾ ನೋಡಲ್ ಅಧಿಕಾರಿ ಶಿಕ್ಷಣ ಸಂಯೋಜಕ ರವಿ ಗಿರಿಯಪ್ಪಗೌಡರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎ.ಹದ್ಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts