ಬ್ರಹ್ಮಾವರ: ಕಾಶ್ಮೀರದಲ್ಲಿ ಅಮಾಯಕರನ್ನು ಕೊಂದ ಘಟನೆಯಲ್ಲಿ ಭಾಗಿಯಾದ ಪಾಕಿಸ್ತಾನಿ ಬೆಂಬಲಿತ ಉಗ್ರರನ್ನು ಮತ್ತು ಬೆಂಬಲ ನೀಡಿದದವರಿಗೆ ಕೇಂದ್ರ ಸರ್ಕಾರ ತಕ್ಕಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಮಡಿದವರಿಗೆ ಶೃದ್ಧಾಂಜಲಿ ನೀಡುವ ಕಾರ್ಯಕ್ರಮ ಶನಿವಾರ ಸಂಜೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ನಡೆಯಿತು. ಮೇಣದಬತ್ತಿ ಉರಿಸಿ ಮೌನಪ್ರಾರ್ಥನೆ ಸಲ್ಲಿಸಲಾಯಿತು.

ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಜನರ ಪ್ರಾಣ ತೆಗೆಯುತ್ತಿರುವ ದೇಶದ್ರೋಹಿಗಳನ್ನು ಪತ್ತೆ ಹಚ್ಚಿ ತಕ್ಕ ಶಿಕ್ಷೆ ನೀಡಬೇಕು. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು.
ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಭುಜಂಗಶೆಟ್ಟಿ, ನಿತ್ಯಾನಂದ ಶೆಟ್ಟಿ, ಡಾ.ಸುನೀತಾಶೆಟ್ಟಿ, ರಮೇಶ್ ಕಾಂಚನ್, ಕಿಶನ್ ಹೆಗ್ಡೆ, ಪ್ರಖ್ಯಾತ್ ಶೆಟ್ಟಿ, ವೆರೋನಿಕಾ ಕರ್ನೆಲಿಯೋ ಮತ್ತಿತರರು ಇದ್ದರು.