

ಚನ್ನರಾಯಪಟ್ಟಣ: ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರೆ ಕರೋನಾ ವಾರಿಯರ್ಸ್‌ರಂತೆ ಡೆಂೆ ವಾರಿಯರ್ಸ್‌ಗಳಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ ತಿಳಿಸಿದರು.
ಪಟ್ಟಣದ ಗೂರನಹಳ್ಳಿ ಬಡಾವಣೆಯ ಬಾಗೂರು ರಸ್ತೆಗೆ ಹೊಂದಿಕೊಂಡಂತಿರುವ ಕೆರೆ ಹಂಚಿನ ಪ್ರದೇಶದಲ್ಲಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಪುರಸಭೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಡೆಂೆ ಜ್ವರದ ಮುಂಜಾಗ್ರತೆ ಕುರಿತು ಶಾಲೆಗಳಲ್ಲಿ ಅರಿವು ಮೂಡಿಸುವ ಹಾಗೂ ಸಫಾಯಿ ಅಪ್ನಾವೋ, ಬಿಮಾರಿ ಭಾಗಾವೋ ಅಭಿಯಾನದಲ್ಲಿ ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಲ್ಲಿ ಡೆಂೆ ಕುರಿತು ಜಾಗೃತಿ ಮೂಡಿಸಿದರೆ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಮಳೆಗಾಲ ಇರುವುದರಿಂದ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕಿದೆ. ಆ ಮೂಲಕ ಸೊಳ್ಳೆಗಳ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮನೆಗಳಲ್ಲಿ ಸೊಳ್ಳೆ ಪರದೆ, ಸೊಳ್ಳೆ ಬತ್ತಿಗಳನ್ನು ಬಳಸಬೇಕು. ವಿವಿಧ ಪ್ರದೇಶಗಳಲ್ಲಿ ಫಾಗಿಂಗ್ ಕೂಡ ಮಾಡಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ದಾಖಲಾದ ಪ್ರದೇಶಗಳಲ್ಲಿನ ಪ್ರತಿ ಮನೆಗೆ ಭೇಟಿ ನೀಡಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಕೆ.ಎನ್.ಹೇಮಂತ್ ಕುಮಾರ್ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಬ್ಲಾಕ್ ಸ್ಪಾಟ್ ತಡೆಯುವಿಕೆಗಾಗಿ ಮಿನಿ ಉದ್ಯಾನ ನಿರ್ಮಿಸುವ ಮೂಲಕ ಪಟ್ಟಣದ ಸೌಂದರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾವತಿ, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಿಂಗೇಗೌಡ, ಶಿವಲಿಂಗಯ್ಯ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ವಿಶಾಲಾಕ್ಷಿ, ಕಿರಿಯ ಆರೋಗ್ಯ ಸುರಕ್ಷತಾಧಿಕಾರಿಗಳು ಮಮತಾ ಪವಿತ್ರ, ಪುರಸಭೆಯ ಪರಿಸರ ಇಂಜಿನಿಯರ್ ಕಾವ್ಯಾ, ಪುರಸಭೆ ಆರೋಗ್ಯಾಧಿಕಾರಿಗಳಾದ ಉಮಾದೇವಿ, ರಾಜು, ಮಂಜುನಾಥ್, ಪುರಸಭಾ ಸದಸ್ಯರಾದ ಯೋಗೀಶ್, ರಾಧಾ ಮಂಜುನಾಥ್, ಇಲಿಯಾಸ್, ಕವಿತಾ ರಾಜು, ಸುರೇಶ್, ಗಣೇಶ್ ಇತರರಿದ್ದರು.