ಮಕ್ಕಳನ್ನು ವಿವಿಧ ಗುಣಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಲಿ

blank

ಸಿದ್ದಾಪುರ: ಮುಂದಿನ ದಿನದಲ್ಲಿ ದೇಶಕ್ಕೆ ದೊಡ್ಡ ಕೊಡುಗೆ ನೀಡುವ ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಮುಖ್ಯ. ಮಕ್ಕಳಿಗೆ ಪ್ರತಿನಿತ್ಯ ಶಿಕ್ಷಣದ ಮಹತ್ವ ಹಾಗೂ ಮೌಲ್ಯ ತಿಳಿಸಬೇಕಾಗಿದೆ. ಮಕ್ಕಳಿಗೆ ಶಿಕ್ಷಣದ ಜತೆಗೆ ವಿವಿಧ ಗುಣಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಬೇಕು. ಅಂತಹ ಕಾರ್ಯವನ್ನು ಶಿಕ್ಷಣ ಇಲಾಖೆಯೊಂದಿಗೆ ಸ್ಕೋಡ್​ವೆಸ್ ಸಂಸ್ಥೆ ಸಹಕರಿಸುತ್ತಿರುವುದು ಶ್ಲಾಘನೀಯ ಎಂದು ಬಿಇಒ ಎಂ.ಎಚ್. ನಾಯ್ಕ ಹೇಳಿದರು.

ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಕೋಡ್​ವೆಸ್ ಸಂಸ್ಥೆ ಶಿರಸಿ ಹಾಗೂ ದೇಸಾಯಿ ಫೌಂಡೇಷನ್ ಟ್ರಸ್ಟ್ ಗುಜರಾತ್ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸ್ಕೋಡ್​ವೆಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಮಾತನಾಡಿ, ಇಂದು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಿಲ್ಲ. ಏಕೆಂದರೆ ಸರ್ಕಾರಿ ಶಾಲೆಯಲ್ಲಿ ಇಂದು ಮಕ್ಕಳಿಗೆ ಯಾವ ಕೊರತೆಯೂ ಇಲ್ಲ. ಶಿಕ್ಷಕರು ಉತ್ತಮವಾಗಿ ಶಿಕ್ಷಣ ನೀಡುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಮಕ್ಕಳು ಶಿಕ್ಷಣದಲ್ಲಿ ಸವಾಲನ್ನು ಎದುರಿಸಬೇಕು. ಸವಾಲನ್ನು ಸ್ವೀಕರಿಸಿ ಶಿಕ್ಷಣ ಕಲಿಯಬೇಕಾಗಿದೆ. ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯವಾಗಬೇಕು ಎಂದರು. ನೂರು ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಮಕ್ಕಳ ಆರೋಗ್ಯ ಮೇಳ ನಡೆಸುವುದರೊಂದಿಗೆ ಮಕ್ಕಳಿಂದ ವಿಜ್ಞಾನ ಪ್ರದರ್ಶನ ನಡೆಸಲಾಗುತ್ತಿದೆ ಎಂದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ರಮೇಶ ಹಾರ್ಸಿಮನೆ, ಎಸ್​ಡಿಎಂಸಿ ಅಧ್ಯಕ್ಷ ರಘುವೀರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ. ನಾಯ್ಕ, ಸಿಆರ್​ಪಿ ಶೋಭಾ ಡಿ.ಎಸ್., ಮುಖ್ಯಾಧ್ಯಾಪಕಿಯರಾದ ಸುಲೋಚನಾ, ಶಾರದಾ ಉಪಸ್ಥಿತರಿದ್ದರು. ಸಮನ್ವಯಾಧಿಕಾರಿ ಉಮೇಶ ಮರಾಠಿ ಕಾರ್ಯಕ್ರಮ ನಿರ್ವಹಿಸಿದರು.

ನಂತರ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಯಿತು. ಬಳಿಕ ವಿವಿಧ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತುಪ್ರದರ್ಶನ ನಡೆಯಿತು.

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…