ಮಕ್ಕಳು ಬಸವಣ್ಣ ವಚನಗಳನ್ನು ಅನುಸರಿಸಲಿ

blank

ತಿ.ನರಸೀಪುರ: ಮಕ್ಕಳು ಸಂಸ್ಕಾರವಂತರಾಗಬೇಕು, ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸಬೇಕು. ಬಸವಣ್ಣನವರ ವಚನಗಳ ಸಂದೇಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸಾತ್ವಿಕ ಬದುಕು ನಡೆಸಬೇಕು ಎಂದು ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ್ ಸಲಹೆ ನೀಡಿದರು.

ಪಟ್ಟಣದ ವಿದ್ಯೋದಯ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಶನಿವಾರ ಶರಣ ಸಾಹಿತ್ಯ ಪರಿಷತ್ ಹಾಗೂ ಗ್ರಾಮ ವಿದ್ಯೋದಯ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.
ವಚನಗಳು ಮನುಷ್ಯನ ಆದರ್ಶ ಬದುಕಿಗೆ ದಾರಿದೀಪವಾಗಿವೆ. ಹೆತ್ತ ತಂದೆ-ತಾಯಿಯರು, ವಿದ್ಯೆ ಕಲಿಸಿದ ಗುರುಗಳು ಸರಿಯಾದ ಮಾರ್ಗದರ್ಶನ ನೀಡುತ್ತಾರೋ ಗೊತ್ತಿಲ್ಲ, ಆದರೆ ವಚನಗಳು ಉತ್ತಮ, ಆದರ್ಶ ಬದುಕಿಗೆ ದಾರಿ ಮಾಡಿಕೊಡುವುದರಿಂದ ವಚನಗಳನ್ನು ಪ್ರತಿಯೊಬ್ಬರೂ ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಂಸ್ಕಾರದಿಂದ ಬದುಕು ಸಾರ್ಥಕವಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿರುವ ಇಂದಿನ ಪೀಳಿಗೆಯವರಿಗೆ ಸಂಸ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ. ಜೀವನದ ನಿಜ ಸತ್ಯ, ಅಂಕು-ಡೊಂಕುಗಳನ್ನು ತಿದ್ದಿ ಹೇಳುವುದು ಹಿರಿಯರ ಕೆಲಸ. ಅದನ್ನು ಪಾಲಿಸುವುದು, ಆಚರಣೆಗೆ ತರುವುದು ಕಿರಿಯರ ಜವಾಬ್ದಾರಿ ಎಂದು ಅರಳಿ ನಾಗರಾಜ್ ತಿಳಿಸಿದರು.
ಖೋ ಖೋ ಪಂದ್ಯಾವಳಿಯ ವಿಶ್ವಕಪ್ ವಿಜೇತೆ ಚೈತ್ರಾ ಅವರನ್ನು ಸನ್ಮಾನಿಸಿದ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ ಮಾತನಾಡಿ, ಬಸವಾದಿ ಶರಣರು ತಮ್ಮ ವಚನ ಸಾಹಿತ್ಯವನ್ನು ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ನೀಡಿ ಕನ್ನಡ ಭಾಷೆಯ ಹಿರಿಮೆ ಹೆಚ್ಚಿಸಿದರು. ಶರಣರು ತಮ್ಮ ವಚನಗಳ ಮೂಲಕ ಸರಳವಾಗಿ ಜೀವನಮೌಲ್ಯ, ವೈಚಾರಿಕ ಬದುಕು, ಮೌಢ್ಯಗಳ ಜಾಗೃತಿ ಮೂಡಿಸಿದರು ಎಂದರು.
ಖೋ ಖೋ ವಿಶ್ವ ಕಪ್ ಪಂದ್ಯಾವಳಿಯಲ್ಲಿ ರಾಷ್ಟ್ರದ ಹಿರಿಮೆಯನ್ನು ಪ್ರಪಂಚಕ್ಕೆ ಕೊಂಡೊಯ್ದು ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಮ್ಮ ತಾಲೂಕಿನ ಹೆಮ್ಮೆಯ ಕುವರಿ ಚೈತ್ರಾ ಅವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನೀಡಿರುವುದು ಸರಿಯಲ್ಲ, ಮಹಾರಾಷ್ಟ್ರ ಸರ್ಕಾರವು ಅಲ್ಲಿನ ಕ್ರೀಡಾಪಟುಗಳಿಗೆ 2.25 ಕೋಟಿ ರೂ. ಹಾಗೂ ಮಧ್ಯಪ್ರದೇಶ ಸರ್ಕಾರ 1.50 ಕೋಟಿ ರೂ. ಕೊಟ್ಟು ಸಾಧನೆಗೆ ಪ್ರೋತ್ಸಾಹ ನೀಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿಲ್ಲ. ಇಂತಹ ವ್ಯವಸ್ಥೆಯಲ್ಲಿ ಕ್ರೀಡಾಪಟುಗಳು ಸಾಧನೆ ಮಾಡುವುದಾದರು ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು.

ವಾಟಾಳು ಮಠದ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಪಿಕಾರ್ಡ್ ಬ್ಯಾಂಕ್‌ನ ನೂತನ ನಿರ್ದೇಶಕರಾದ ಎಂ.ಎಸ್ ಶಿವಮೂರ್ತಿ, ಎನ್.ಎನ್.ಮಹದೇವಸ್ವಾಮಿ, ಎಸ್.ಮಹೇಶ್ ಅವರನ್ನು ಅಭಿನಂದಿಸಲಾಯಿತು. ವಿದ್ಯೋದಯ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ, ಶರಣ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಚಂದ್ರಶೇಖರ್, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮಶೇಖರಪ್ಪ, ಉಪಾಧ್ಯಕ್ಷ ಮಹದೇವಸ್ವಾಮಿ, ವೀರಶೈವ ಮಹಾಸಭಾದ ಅಧ್ಯಕ್ಷ ಸಿ.ಎಂ.ಪ್ರಕಾಶ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಶಿವಕುಮಾರ್(ಸತ್ಯಪ್ಪ), ಬೆನಕನಹಳ್ಳಿ ಪ್ರಭುಸ್ವಾಮಿ, ಮೂಗೂರು ಕುಮಾರಸ್ವಾಮಿ, ರಾಜಶೇಖರ್, ಆಡಿಟರ್ ಮಂಜುನಾಥ್, ಬಸವ ಬಳಗದ ಅಧ್ಯಕ್ಷ ಪರಮೇಶ್ ಪಟೇಲ್, ಸೀಹಳ್ಳಿ ಗುರುಮೂರ್ತಿ, ಕುಮಾರ್, ಕೆಇಬಿ ನಿವೃತ್ತ ನೌಕರ ಸಿದ್ದಲಿಂಗಸ್ವಾಮಿ ಹಾಗೂ ಇತರರು ಇದ್ದರು.

 

Share This Article

ಬೇಸಿಗೆಯಲ್ಲಿ ತಣ್ಣನೆಯ ನಿಂಬೆ ಜ್ಯೂಸ್ ಕುಡಿಯುವ ಮುನ್ನ ಎಚ್ಚರ..!Lemon Juice

Lemon Juice: ನಿಂಬೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೇಸಿಗೆಯಲ್ಲಿ…

ನೀವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಒಮ್ಮೆ ಹೀಗೆ ಮಾಡಿ ನೋಡಿ..Gastric Problem

Gastric Problem: ಪ್ರಸ್ತುತ ಯುಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ…

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…